ಬೆಂಗಳೂರು:- ಅಬಕಾರಿ ಸಚಿವ ತಿಮ್ಮಾಪುರರಿಂದ ವಾರಕ್ಕೆ 18 ಕೋಟಿ ರೂ. ಹಫ್ತಾ ವಸೂಲಿ ಮಾಡಲಾಗುತ್ತಿದೆ ಎಂದು ಆರ್ ಅಶೋಕ ವಾಗ್ದಾಳಿ ಮಾಡಿದ್ದಾರೆ.
Reservation: ಉದ್ಯೋಗದಲ್ಲಿರುವ ಮಹಿಳೆಯರಿಗೆ ಗುಡ್ ನ್ಯೂಸ್: 35% ಮೀಸಲಾತಿ ಘೋಷಿಸಿದ ಸರ್ಕಾರ
ಕರ್ನಾಟಕ ಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಈ ವಿಚಾರವಾಗಿ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ಸಚಿವ ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ಮದ್ಯದಂಗಡಿ ಮಾಲೀಕರೇ ದೂರು ಕೊಟ್ಟಿದ್ದಾರೆ. ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ವೈನ್ ಸ್ಟೋರ್ಗಳಿವೆ. ಪ್ರತಿಯೊಂದರಿಂದ 20 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಅಶೋಕ್ ಗಂಭೀರ ಆರೋಪ ಮಾಡಿದರು.
ನಮ್ಮ ವಿರುದ್ಧ ಹಿಂದೆ ಪೇಸಿಎಂ ಪೋಸ್ಟರ್ ಅಂಟಿಸಿದ್ದಿರಿ. ಆಗ ನಾವು ನಿಮ್ಮನ್ನು ಸನ್ಮಾನ ಮಾಡಲು ಆಗಲಿಲ್ಲ. ಈಗ ಪೇಸಿಎಂ ಪೋಸ್ಟರ್ ಅಂಟಿಸಿದಾಗ ಹೇಳಿ ಬಂದು ಸನ್ಮಾನ ಮಾಡುತ್ತೇವೆ ಎಂದು ಅಶೋಕ್ ವ್ಯಂಗ್ಯವಾಡಿದರು.
ಲೋಕಾಯುಕ್ತ ಅಧಿಕಾರಿಗಳಿಂದ ಸಿದ್ದರಾಮಯ್ಯ ವಿಚಾರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅಶೋಕ್, ಈ ಸರ್ಕಾರದಲ್ಲಿ ಪ್ರತಿ ನಿತ್ಯ ಒಬ್ಬರಲ್ಲ ಒಬ್ಬ ಸಚಿವರು ಲೂಟಿ ಹೊಡೆಯುತ್ತಿದ್ದಾರೆ. 40 ವರ್ಷದ ರಾಜಕೀಯ ಜೀವನ ತೆರೆದ ಪುಸ್ತಕ ಎಂದಿದ್ದರು. ತೆರೆದ ಪುಸ್ತಕ ಎಂದವರು ಲೋಕಾಯುಕ್ತ ವಿಚಾರಣೆಗೆ ಹೋಗಿದ್ದಾರೆ. ಮುಖ್ಯಮಂತ್ರಿ ಆಗಿ ವಿಚಾರಣೆ ಎದುರಿಸುತ್ತಿದ್ದಾರೆ, ನಾಚಿಕೆ ಆಗಲ್ವಾ ಎಂದು ಅಶೋಕ್ ಪ್ರಶ್ನಿಸಿದರು.