ಬೆಳಗಾವಿ: ಎಸ್ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್, ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ವಿರುದ್ಧ ಪ್ರಕರಣ ದಾಖಲಾಗಿದೆ. ತಾಯಿ ಮಲ್ಲವ್ವ ನೀಡಿದ ದೂರಿನನ್ವಯ ತಹಶೀಲ್ದಾರ್ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಮತ್ತು ಸಹೋದ್ಯೋಗಿ ಅಶೋಕ ಕಬ್ಬಲಿಗೇರ್ ಮೇಲೆ ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.
Driving License ಕಳೆದು ಹೋಗಿದ್ಯಾ.? ಹಾಗಿದ್ರೆ ಮರಳಿ ಪಡೆಯಲು ಹೀಗೆ ಮಾಡಿ ಸಾಕು
ಪ್ರಕರಣ ದಾಖಲಾಗ್ತಿದ್ದಂತೆ ಮೂವರು ಆರೋಪಿಗಳು ನಾಪತ್ತೆ ಆಗಿದ್ದು ಆರೋಪಿಗಳ ಬಂಧನಕ್ಕೆ ವಿಶೇಷ ತಂಡವನ್ನ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ರಚಿಸಿದ್ದಾರೆ. ವಾಟ್ಸಪ್ನಲ್ಲಿ ನನ್ನ ಸಾವಿಗೆ ಮೂರು ಜನ ಕಾರಣ ಅಂತಾ ಬರೆದು ತಹಶಿಲ್ದಾರ್ ಕಚೇರಿಯಲ್ಲೇ ರುದ್ರಣ್ಣ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.