ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನವನ್ನು ಅಕ್ರಮವಾಗಿ ಪಡೆದಿದ್ದಾರೆಂಬ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ತಮ್ಮ ನಾಲ್ಕೂವರೆ ದಶಕಗಳ ಸುದೀರ್ಘ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸಿದ್ದು ಇದೇ ಮೊದಲು.
ಇನ್ನೂ ವಿಚಾರಣೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮತ್ತೆ ವಿಚಾರಣೆಗೆ ಬರಲು ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ ಎಂದು ತಿಳಿಸಿದರು.
Driving License ಕಳೆದು ಹೋಗಿದ್ಯಾ.? ಹಾಗಿದ್ರೆ ಮರಳಿ ಪಡೆಯಲು ಹೀಗೆ ಮಾಡಿ ಸಾಕು
ಕಾನೂನು ಪ್ರಕಾರವೇ ನಿವೇಶನ ಪಡೆದಿದ್ದೇನೆ. ಬಿಜೆಪಿ, ಜೆಡಿಎಸ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿವೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗೆ ಉತ್ತರಿಸಿದ್ದೇನೆ. ಇನ್ನು, ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಬಿಜೆಪಿಯವರು ಆಗ್ರಹಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಯಾವುದಾದರೂ ಕೇಸ್ ಸಿಬಿಐಗೆ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.
ಲೋಕಾಯುಕ್ತ ಸ್ವತಂತ್ರವಾಗಿ ತನಿಖೆ ಮಾಡುತ್ತಿರುವ ಸಂಸ್ಥೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗೆ ಉತ್ತರಿಸಿದ್ದೇನೆ. ಎಲ್ಲವೂ ಕೂಡ ಕಾನೂನು ಪ್ರಕಾರವೇ ನಡೆದಿದೆ. ಬಿಜೆಪಿ, ಜೆಡಿಎಸ್ನವರು ಮಾಡಿದ್ದ ಸುಳ್ಳು ಆರೋಪಗಳಿಗೆ ಕೋರ್ಟ್ನಲ್ಲಿ ಉತ್ತರ ನೀಡುತ್ತೇನೆ ಎಂದು ಹೇಳಿದರು.