ತುಮಕೂರು: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ತುಮಕೂರಿನಲ್ಲಿ ಪೋಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಕ್ರಮ್ ಎಂದು ಗುರುತಿಸಲಾಗಿದೆ. ಆರೋಪಿಯ, ಸಲ್ಮಾನ್ ಖಾನ್ 5 ಕೋಟಿ ರೂ. ಹಣ ನೀಡಬೇಕು ಮತ್ತು ದೇವಾಲಯಕ್ಕೆ ಬಂದು ಕ್ಷಮೆ ಕೋರಬೇಕು ಎಂದು ಮುಂಬೈ ಪೊಲೀಸರಿಗೆ ಮೆಸೇಜ್ ಕಳುಹಿಸಿದ್ದ.
ಮಹಿಳೆಯರೇ “ಸೆಕ್ಸ್” ವೇಳೆ ನಿಮಗೆ ಸಿಕ್ಕಾಪಟ್ಟೆ ನೋವಾಗುತ್ತಾ..? ಕಡಿಮೆ ಮಾಡೋ ಟಿಪ್ಸ್ ಇಲ್ಲಿದೆ ನೋಡಿ
ಆರೋಪಿಯನ್ನು ಬಂಧಿಸಲಾಗಿದ್ದು ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಜೀವಂತವಾಗಿರಲು ಬಯಸಿದರೆ ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಇಲ್ಲವೇ 5 ಕೋಟಿ ಹಣ ಕೊಡಿ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೆ ಬಿಷ್ಣೋಯ್ ಗ್ಯಾಂಗ್ ಹೆಸರಿಂದ ಬೆದರಿಕೆ ಬಂದಿತ್ತು. ಆರೋಪಿ ಮುಂಬೈ ಪೊಲೀಸರಿಗೆ ವಾಟ್ಸಪ್ ಸಂದೇಶ ಕಳುಹಿಸಿದ್ದ. ಒಂದು ವಾರದಲ್ಲಿ ಸಲ್ಮಾನ್ ಖಾನ್ಗೆ ಬಂದ ಎರಡನೇ ಕೊಲೆ ಬೆದರಿಕೆ ಇದಾಗಿದೆ.