ಬೆಂಗಳೂರು:- ಯಾವುದೇ ಉದ್ಘಾಟನೆ ಆಡಂಬರವಿಲ್ಲದೇ ನಾಗಸಂದ್ರ-ಮಾದಾವರ ಮೆಟ್ರೋ ಸೇವೆ ಆರಂಭವಾಗಲಿದೆ.
HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ: ಆದ್ರೆ ಈ ದಿನಾಂಕದೊಳಗೆ ಮಿಸ್ ಆದ್ರೆ ಫೈನ್ ಫಿಕ್ಸ್!
ನಾಳೆ ಸಾರ್ವಜನಿಕರಿಗೆ ಮೆಟ್ರೋ ಆರಂಭಗೊಳ್ಳಿದ್ದು, ಇಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಾಯೋಗಿಕ ಚಾಲನೆ ನೀಡಿದ್ದಾರೆ. ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ನಿವಾರಿಸುವ ದೃಷ್ಟಿಯಿಂದ ಎರಡನೇ ಹಂತದ ಮೆಟ್ರೋ ಯೋಜನೆಯ ಅಡಿಯಲ್ಲಿ ಈ ಮೆಟ್ರೋ ಮಾರ್ಗವನ್ನು ವಿಸ್ತರಿಸಲಾಗಿದೆ.
ಸದ್ಯ ನಾಗಸಂದ್ರ ನಿಲ್ದಾಣದವರೆಗೂ ಹಸಿರು ಮಾರ್ಗ ಇದ್ದು, ನಾಗಸಂದ್ರದಿಂದ ಮಾದಾವರವರೆಗೂ ಮೆಟ್ರೋ ಮಾರ್ಗ ವಿಸ್ತೃತ ಮಾಡಲಾಗಿದೆ. ಯಶವಂತಪುರದಿಂದ ಮಾದಾವರವರೆಗೂ ಪ್ರಾಯೋಗಿಕ ಸಂಚಾರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ವಿಸ್ತೃತ ಮೆಟ್ರೋ ಮಾರ್ಗದಲ್ಲಿ ಪ್ರಯಾಣಿಸಿದ್ದಾರೆ.
ಇನ್ನು ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ನಾಗಸಂದ್ರದಿಂದ ಮಾದಾವರ ಮೆಟ್ರೋ ನಿಲ್ದಾಣದವರೆಗಿನ ವಿಸ್ತರಿತ 3.14 ಕಿಮೀ ಮಾರ್ಗವನ್ನು ಇಂದು ಪರಿಶೀಲನೆ ನಡೆಸಿದೆ. ನಾಗರಿಕರನ್ನು ಹೆಚ್ಚು ಕಾಯಿಸುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಈಗಲೇ ಹೊಸ ಮಾರ್ಗದ ಸೇವೆಯನ್ನು ಆರಂಭಿಸಲಾಗಿದ್ದು, ಸದ್ಯದಲ್ಲೇ ಅಧಿಕೃತವಾಗಿ ಉದ್ಘಾಟಿಸಲಾಗುವುದು ಎಂದು ತಿಳಿಸಿದ್ದಾರೆ.
ಇಡೀ ದೇಶದಲ್ಲೇ ಅತಿ ಹೆಚ್ಚು ಮೆಟ್ರೋ ಪ್ರಯಾಣಿಕರನ್ನು ಬೆಂಗಳೂರು ಹೊಂದಿದೆ. ವಿಸ್ತರಿತ 3.14 ಕಿ.ಮೀ ಸೇರಿ ಬೆಂಗಳೂರು ಮೆಟ್ರೋ 76.95 ಕಿಮೀ ವ್ಯಾಪ್ತಿಯನ್ನು ಹೊಂದಿದೆ. ಮೆಟ್ರೋ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ವರ್ಷಕ್ಕೆ ಇನ್ನೂ 30 ಕಿ.ಮೀ ಸೇರ್ಪಡೆಯಾಗಲಿದೆ ಎಂದಿದ್ದಾರೆ.
2026ಕ್ಕೆ ಬೆಂಗಳೂರು ಮೆಟ್ರೋದ ಒಟ್ಟು ವ್ಯಾಪ್ತಿ 175 ಕಿ.ಮೀ ಆಗಲಿದೆ ಎಂದು ತಿಳಿಸಿದೆ. ಈ ವೇಳೆ ಸಂಸದ ತೇಜಸ್ವಿ ಸೂರ್ಯ, ನೆಲಮಂಗಲ ಶಾಸಕ ಎಂ. ಶ್ರೀನಿವಾಸ್, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಮೊದಲಾದವರು ಉಪಸ್ಥಿತರಿದ್ದರು