ಬೆಂಗಳೂರು:- ಸಿದ್ದರಾಮಯ್ಯ ವಿರುದ್ಧ ಇಡಿ- ಸಿಬಿಐ ದುರ್ಬಳಕೆ ಆರೋಪ ಹಿನ್ನೆಲೆ ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ಕೈಗೊಂಡಿದ್ದಾರೆ.
ನಾನು ಆ ತಪ್ಪುಗಳನ್ನು ಮಾಡ್ಬಾರ್ದಿತ್ತು: ಕೊನೆಗೂ ಬೇಸರ ಹೊರ ಹಾಕಿದ ಸಮಂತಾ!
ದೆಹಲಿಯ ಕರ್ನಾಟಕ ಸಂಘದಲ್ಲಿ ಹಿಂದುಳಿದ ವರ್ಗಗಳ ವೇದಿಕೆಯಿಂದ ಪ್ರತಿಭಟನಾ ಸಭೆ ನಡೆಯಲಿದ್ದು, ಎಲ್. ಹನುಮಂತಯ್ಯ, ಎಸ್. ಜಿ ಸಿದ್ದರಾಮಯ್ಯ, ಕಾಳೆಗೌಡ ನಾಗವಾರ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಮುಡಾ ಹಗರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆ ಸಂವಿಧಾನಬಾಹಿರ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದರು. ಅನೇಕ ರಾಜ್ಯಗಳಲ್ಲಿ ಇದೇ ರೀತಿ ಮಾಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಎಲ್ಲ ಸೇರಿಕೊಂಡಿದ್ದಾರೆ. ನಾನು ಕಾನೂನು ಹೋರಾಟ ಮಾಡುತ್ತೇವೆ ಎಂದಿದ್ದರು.
ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಹೆಸರು ಕೇಳಿಬಂದಿದ್ದು ವಿಪಕ್ಷ ಬಿಜೆಪಿಗೆ ಅಸ್ತ್ರವಾಗಿತ್ತು. ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟನೆ ಕೂಡ ಮಾಡಿದ್ದರು. ಇದೇ ವೇಳೆ ಇಡಿ ಮತ್ತು ಸಿಬಿಐಯನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪ ಕೂಡ ಕೇಳಿಬಂದಿತ್ತು. ಹೀಗಾಗಿ ಇದೀಗ ನಾಳೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ಸಭೆ ನಡೆಯಲಿದೆ.