ಬೆಂಗಳೂರು: ಮೆಟ್ರೋ ಹಸಿರು ವಿಭಾಗದ ನಾಗಸಂದ್ರ – ಮಾದಾವರ ವಿಸ್ತರಿತ ಮಾರ್ಗ ಇಂದಿನಿಂದ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ. ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಬೆಂಗಳೂರಿನ ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಯಶವಂತಪುರದಿಂದ ಮಾದಾವರದವರೆಗೆ ಪ್ರಾಯೋಗಿಕ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು.
ಮಾದಾವರದಿಂದ ಇಂದು ಬೆಳಗ್ಗೆ 5 ಗಂಟೆಗೆ ಮೊದಲ ಮೆಟ್ರೋ ಸೇವೆ ಆರಂಭವಾದರೆ ರಾತ್ರಿ 11 ಗಂಟೆ ಕೊನೆಯ ಮೆಟ್ರೋ ರೈಲು ಹೊರಡಲಿದೆ. 10 ನಿಮಿಷಕ್ಕೊಮ್ಮೆ ಮಾದಾವರ ಟು ನಾಗಸಂದ್ರ ನಡುವೆ ಮೆಟ್ರೋ ರೈಲು ಸಂಚಾರ ಮಾಡಲಿದೆ. ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾದ ನಂತರ ವಿಸ್ತರಿತ ಹಸಿರು ಮಾರ್ಗದ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವ ಸಂತಸದ ವಿಷಯವನ್ನು ಸಂಸದ ತೇಜಸ್ವಿ ಸೂರ್ಯ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದರು.
ಅಪ್ಪಿತಪ್ಪಿಯೂ ನಿಮ್ಮ ಮನೆಯಲ್ಲಿ ಇಂತಹ ಮರ ಗಿಡಗಳನ್ನು ಬೆಳಸಬೇಡಿ! ಆರ್ಥಿಕವಾಗಿ ನಷ್ಟವಾಗುತ್ತೆ!
ವಿಸ್ತರಿತ ಹಸಿರು ಮಾರ್ಗದಲ್ಲಿ ಮಂಜುನಾಥ ನಗರ, ಚಿಕ್ಕಬಿದರುಕಲ್ಲು, ಮಾದಾವರ ಗಳನ್ನು ಒಳಗೊಂಡ 3 ಮೆಟ್ರೋ ನಿಲ್ದಾಣಗಳಿವೆ. ತುಮಕೂರು ರಸ್ತೆಯಲ್ಲಿನ ಸಂಚಾರ ದಟ್ಟಣೆ ನಿಯಂತ್ರಣದಲ್ಲಿ ಈ ಮಾರ್ಗವು ಬಹುಮುಖ್ಯ ಪಾತ್ರ ವಹಿಸಲಿದೆ. 91 ತಿಂಗಳ ಅವಧಿ ತೆಗೆದುಕೊಂಡ ನಂತರ ಇದೀಗ ಸಾರ್ವಜನಿಕರ ಸೇವೆಗೆ ಮುಕ್ತವಾಗಿದೆ.
ವಿಸ್ತರಿತ 3.14 ಕಿ.ಮೀ ಸೇರಿ ಬೆಂಗಳೂರು ಮೆಟ್ರೋ 76.95 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಮೆಟ್ರೋ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ವರ್ಷಕ್ಕೆ ಇನ್ನೂ 30 ಕಿ.ಮೀ. ಸೇರ್ಪಡೆಯಾಗಲಿದೆ. 2026ಕ್ಕೆ ಬೆಂಗಳೂರು ಮೆಟ್ರೋದ ಒಟ್ಟು ವ್ಯಾಪ್ತಿ 175 ಕಿ.ಮೀ ಆಗಲಿದೆ.