ಬೆಳಗಾವಿ: ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಿ ಪತ್ರವನ್ನು ಬರೆದಿರುತ್ತಾರೆ. ಡಿಸೆಂಬರ್ 26-27 ಅಥವಾ ಜನವರಿ 2025 ರಿಂದ ಅಕ್ಟೋಬರ್-2025ರೊಳಗಾಗಿ ದಿನಾಂಕ ನೀಡಲು ಕೋರಲಾಗಿದೆ. ಜಂಟಿ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡಿ, ವಿಸ್ತೃತವಾಗಿ ಚರ್ಚಿಸಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು. ಅಕ್ಟೋಬರ್ 2 ರಿಂದ ಒಂದು ವರ್ಷಗಳ ಕಾಲ ಶತಮಾನೋತ್ಸವ ವರ್ಷಾಚರಣೆ.
ಪಿಯುಸಿ ಪಾಸ್ ಆದವರಿಗೆ ಗುಡ್ ನ್ಯೂಸ್: ಕರ್ನಾಟಕ ಲೋಕಾಯುಕ್ತದಲ್ಲಿದೆ ಭರ್ಜರಿ ಉದ್ಯೋಗಾವಕಾಶ – ಇಂದೇ ಅರ್ಜಿ ಸಲ್ಲಿಸಿ
ಅಂತಾರಾಷ್ಟೀಯ ಮಹತ್ವ ಪಡೆಯಲು ವಿಧಾನಮಂಡಳ ಜಂಟಿ ಅಧಿವೇಶನ ನಡೆಸಲು ಹಾಗೂ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆಸಲು ಉದ್ಧೇಶಿಸಲಾಗಿದೆ. ಗಾಂಧೀಜಿಯ ಕುರಿತು ವಿಶೇಷ ಅಭಿಮಾನ ಹೊಂದಿರುವ ಒಬಾಮಾ ಅವರು ಜಂಟಿ ಅಧಿವೇಶನ ಉದ್ಧೇಶಿಸಿ ಮಾತನಾಡಬೇಕು ಎಂಬುದು ಎಲ್ಲರ ಆಶಯ ಎಂದರು. ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನ ಆಚರಣೆ ಮೂಲಕ ಗಾಂಧೀಜಿಯವರ ತತ್ವ ಸಿದ್ಧಾಂತಗಳನ್ನು ಇನ್ನಷ್ಟು ಪ್ರಚುಪಡಿಸಲು ಹಾಗೂ ಮನೆ ಮನೆಗೆ ಗಾಂಧೀಜಿ ಸಿದ್ಧಾಂತಗಳನ್ನು ತಲುಪಿಸುವ ಉದ್ದೇಶ ಹೊಂದಲಾಗಿದೆ.
ಅರ್ಥಪೂರ್ಣ, ರಚನಾತ್ಮಕ ಕಾರ್ಯಕ್ರಮ ಆಯೋಜಿಸಲು ಗಾಂಧಿವಾದಿಗಳು, ಹಿರಿಯರ ಜತೆ ಚರ್ಚಿಸಿ ಅಧಿವೇಶನದ ಇತಿಹಾಸ ಮರುಸೃಷ್ಟಿ ಮತ್ತು ಮೆಲುಕು ಹಾಕಲು ಶತಮಾನೋತ್ಸವ ಆಚರಣೆ ಮಾಡಲಾಗುವುದು. ಇನ್ನು ಅಧಿವೇಶನ ಶತಮಾನೋತ್ಸವ ಆಚರಣೆಗೆ ಸರ್ಕಾರ 25 ಕೋಟಿ ರೂ. ನೀಡಲಿದ್ದು, ಅಗತ್ಯಬಿದ್ದರೆ ಹೆಚ್ಚುವರಿ ಅನುದಾನ ಕೂಡ ನೀಡಲಿದೆ ಎಂದು ಎಚ್.ಕೆ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.