ಹುಬ್ಬಳ್ಳಿ: ವಕ್ಫ್ ಬೋರ್ಡ್ ಹೆಸರಿನಲ್ಲಿ ಸಚಿವ ಜಮೀರ್ ಅಹ್ಮದ್ ರೈತರು ಮತ್ತು ಜನಸಾಮಾನ್ಯರ ಆಸ್ತಿ ಕಬಳಿಸುವ ಮೂಲಕ ದೇಶದ್ರೋಹಿ ಕೆಲಸ ಮಾಡುತ್ತಿದ್ದು, ಅವರನ್ನು ಗಲ್ಲಿಗೇರಿಸಬೇಕು ಎಂದು ಶ್ರೀರಾಮ ಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಜಮೀರ್ ಅಹ್ಮದ್ ರಾಜ್ಯಾದ್ಯಂತ ವಕ್ಫ್ ಅದಾಲತ್ ನಡೆಸುತ್ತಿದ್ದು, ಇದು ಅತ್ಯಂತ ಗಂಭೀರವಾದ ವಿಷಯ. ಇವರಿಗೆ ಅಧಿಕಾರದ ಮದ ಏರಿದೆ. ತನ್ನ ಚಾಮರಾಜಪೇಟೆ ಕ್ಷೇತ್ರದಲ್ಲಿ 25 ಸಾವಿರಕ್ಕೂ ಅಧಿಕ ದೇಶದ್ರೋಹಿ ಬಾಂಗ್ಲಾ ಮುಸ್ಲಿಮರನ್ನು ಸಲಹುತ್ತಿದ್ದಾರೆ. ಈತನಿಂದಲೇ ರಾಜ್ಯದಲ್ಲಿ ಧಂಗೆ, ಗಲಭೆ ನಡೆಯುತ್ತಿವೆ. ಈ ಕಾರಣ ಈತನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.
ಪಿಯುಸಿ ಪಾಸ್ ಆದವರಿಗೆ ಗುಡ್ ನ್ಯೂಸ್: ಕರ್ನಾಟಕ ಲೋಕಾಯುಕ್ತದಲ್ಲಿದೆ ಭರ್ಜರಿ ಉದ್ಯೋಗಾವಕಾಶ – ಇಂದೇ ಅರ್ಜಿ ಸಲ್ಲಿಸಿ
ಇಡೀ ದೇಶದಲ್ಲಿ ರೈತರ ಭೂಮಿಗಳು, ಮನೆ, ಮಠ, ಸರ್ಕಾರಿ ಆಸ್ಪತ್ರೆ, ಕಚೇರಿ, ರಸ್ತೆಗಳು ವಕ್ಫ್ಗೆ ಹೋಗುತ್ತಿವೆ. ಇದು ದೇಶಾದ್ಯಂತ ವೈರಸ್ ರೀತಿ ಹರಡುತ್ತಿದೆ. ಗೂಳಿಯಂತೆ ನುಗ್ಗುತ್ತಿರುವುದು ನೋಡಿದರೆ ದೇಶಕ್ಕೆ ಗಂಡಾಂತರ ಸೃಷ್ಟಿಯಾಗಿದೆ. ದೇಶವನ್ನು ಇಸ್ಲಾಂ ದೇಶ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿನ ಕೆಲ ಮುಸ್ಲಿಂ ಜಿಲ್ಲಾಧಿಕಾರಿ, ತಹಶಿಲ್ದಾರ, ನೋಂದಣಾಧಿಕಾರಿ, ಪಿಡಿಒಗಳು ತಾವು ಸಲ್ಲಿಸುತ್ತಿರುವ ಪ್ರದೇಶಗಳಲ್ಲಿ ವಕ್ಫ್ ಬೋರ್ಡ್ ಹೆಸರಲ್ಲಿ ಆಸ್ತಿ ಕಬಳಿಸುವ ಹುನ್ನಾರ ನಡೆದಿದ್ದು, ಈ ಕುರಿತು ಸಮಗ್ರ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.