ಚಿಕ್ಕಮಗಳೂರು: ಈ ವೀಕೆಂಡ್ನಲ್ಲಿ ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶ್ರೀರಾಮಸೇನೆಯ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ನ.9 ಹಾಗೂ 10 ರಂದು ಎರಡು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಪ್ರದೇಶದಲ್ಲಿ ಓಡಾಡಲು ದತ್ತ ಮಾಲಾಧಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಏನೇ ಮಾಡಿದ್ರೂ ಚಪಾತಿ ಮೃದುವಾಗಿ ಬರ್ತಿಲ್ವಾ: ಹಿಟ್ಟು ನಾದುವಾಗ, ಚಪಾತಿ ಮಾಡುವಾಗ ಈ ಟಿಪ್ಸ್ ಫಾಲೋ ಮಾಡಿ
ಮುಳ್ಳಯ್ಯನಗಿರಿ, ದತ್ತಪೀಠ, ದತ್ತಪೀಠ, ಗಾಳಿಕೆರೆ, ಸೀತಾಳಯ್ಯನಗಿರಿ, ಮಾಣಿಕ್ಯಾಧಾರ ತಾಣಗಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. 21ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ಚಾಲನೆ ದೊರೆತಿದೆ. ದತ್ತಮಾಲಾಧಾರಿಗಳು ಏಳು ದಿನಗಳ ವ್ರತಾಚರಣೆಯಲ್ಲಿ ಇರಲಿದ್ದಾರೆ. ಈ ಬಾರಿ ದತ್ತ ಮಾಲಾ ಅಭಿಯಾನದಲ್ಲಿ ಬಿಜೆಪಿ ನಾಯಕರು ಸಹ ಭಾಗವಹಿಸಲಿದ್ದಾರೆ. ಜಿಲ್ಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಲಿದ್ದಾರೆ.