ಬೆಂಗಳೂರು:- ಧರ್ಮಗುರುಗಳು ಧರ್ಮದಿಂದ ನಡೆದುಕೊಳ್ಳಬೇಕಕು. ಅವರು ಧರ್ಮ ಪ್ರಚಾರಕರಾಗಿ ಪ್ರಚೋದನೆಯ ಹೇಳಿಕೆಗಳನ್ನು ನೀಡಬಾರದು ಎಂದು ಹೇಳುವ ಮೂಲಕ ಜಿ ಪರಮೇಶ್ವರ್ ಅವರು,ಮರುಳಾರಾಧ್ಯ ಶಿವಾಚಾರ್ಯ ಶ್ರೀಗಳಿಗೆ ಟಾಂಗ್ ಕೊಟ್ಟಿದ್ದಾರೆ.
Chief Justice of India: ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ. ಸಂಜೀವ್ ಖನ್ನಾ!
ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು ತಲ್ವಾರ್ ಕೊಡಿ’ ಎಂದು ಮರುಳಾರಾಧ್ಯ ಶಿವಾಚಾರ್ಯ ಶ್ರೀಗಳು ಹೇಳಿರುವ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದು, ನಾವು ಪೂಜನೀಯ ಭಾವದಿಂದ ಸ್ವಾಮೀಜಿಯವರ ಕಾಲಿಗೆ ಬೀಳುತ್ತೇವೆ. ಆದರೆ, ಅಂಥವರೇ ಯುವಕರ ಕೈಯಲ್ಲಿ ತಲ್ವಾರ್ ಕೊಡಿ ಎಂಬುದು ಸರಿಯಲ್ಲ ಎಂದು ಪರಮೇಶ್ವರ್ ಅಭಿಪ್ರಾಯಪಟ್ಟರು.
ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿರುವ ವಿಚಾರ ಸದ್ಯ ಕರ್ನಾಟಕದಾದ್ಯಂತ ತೀವ್ರ ಚರ್ಚೆಯಲ್ಲಿದೆ. ಹಲವೆಡೆ ಪ್ರತಿಭಟನೆಗಳೂ ನಡೆಯುತ್ತಿವೆ. ಕಲಬುರಗಿ ಜಿಲ್ಲೆಯಲ್ಲಿಯೂ ವಕ್ಫ್ ವಿರುದ್ಧ ಪ್ರತಿಭಟನೆಯಲ್ಲಿ ನಡೆದಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ ಮರುಳಾರಾಧ್ಯ ಶಿವಾಚಾರ್ಯ ಶ್ರೀ, ಪೊಲೀಸರ ಎದುರೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.