ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಳೆದ ವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು ಈ ವೇಳೆ ಉಕ್ರೇನ್ ಸಂಘರ್ಷದ ಕುರಿತು ಪ್ರಸ್ತಾಪಿಸಲಾಗಿತ್ತು ಎಂದು ಹೇಳಲಾಗಿತ್ತು. ಆದ್ರೆ ಇದೀಗ ಅಮೆರಿಕ ಮಾಧ್ಯಮಗಳ ವರದಿಯನ್ನು ರಷ್ಯಾ ತಳ್ಳಿಹಾಕಿದೆ.
ಟ್ರಂಪ್ ಅವರು ಗುರುವಾರ ಪುಟಿನ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದ್ದು, ಉಕ್ರೇನ್ ಜೊತೆಗಿನ ಸಂಘರ್ಷ ಮತ್ತಷ್ಟು ಉಲ್ಬಣಗೊಳ್ಳದಂತೆ ನೋಡಿಕೊಳ್ಳಬೇಕು ಎಂದು ಹೇಳಿರುವುದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿತ್ತು.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು, ಟ್ರಪ್, ಪುಟಿನ್ ಅವರಿಗೆ ಯಾವುದೇ ಫೋನ್ ಕರೆ ಮಾಡಿಲ್ಲ. ವಾಷಿಂಗ್ಟನ್ ಪೋಸ್ಟ್ ವರದಿಯು “ಸುಳ್ಳು ಮಾಹಿತಿ, ಇದು ಶುದ್ಧ ಕಾಲ್ಪನಿಕ” ಎಂದಿದ್ದಾರೆ.