ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಇದೇ ಮೊದಲ ಬಾರಿಗೆ ಶಾಸಕ ಮುನಿರತ್ನ ತಮ್ಮ ವಿರುದ್ಧದ ಆರೋಪದ ಬಗ್ಗೆ ಮಾತನಾಡಿದ್ದಾರೆ. ಆರ್ ಆರ್ ನಗರದ ಕಾರ್ಯಕ್ರಮದಲ್ಲಿ ಮಾತನಾಡಿರುವ ಮುನಿರತ್ನ, ಸತ್ಯ ನಿದ್ರಿಸುತ್ತಿರಬಹುದು. ಆದರೆ ಸಾಯಲ್ಲ. ಆ ಮಾರಮ್ಮನ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ. ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದಿದ್ದಾರೆ.
ಆದಿಚುಂಚನಗಿರಿ ಕಾಲಭೈರವನ ಮೇಲೆ ಪ್ರಮಾಣ ಮಾಡ್ತೇನೆ. ನಾನು ಗುತ್ತಿಗೆದಾರನ ಹೆಣ್ಣುಮಗಳ ಬಗ್ಗೆ ಮಾತಾಡಿದ್ದರೆ, ನಾನು ಅತ್ಯಾಚಾರ ಮಾಡಿದ್ರೆ ರಕ್ತಕಾರಿ ಸಾಯುತ್ತೇನೆ, ನಾನು ಏನಾದ್ರು ತಪ್ಪು ಮಾಡಿದ್ರೆ ಹಾಗೆಯೇ ಸಾಯಬಾರದು. ರಕ್ತಕಾರಿ ಸಾಯಬೇಕು. ಸುಳ್ಳು ದೂರು ಕೊಡಬಾರದು. ಇವರ ಸ್ವಾರ್ಥಕ್ಕೋಸ್ಕರ ಅಷ್ಟರ ಮಟ್ಟಿಗೆ ಹೋಗಿದ್ದಾರೆ. ನನ್ನ ಬಳಿ ಯಾರೇ ಬಂದ್ರೂ ಏನಮ್ಮ, ತಾಯಿ ಅಂತೇನೆ. ಈ ಎರಡು ಪದ ಬಿಟ್ಟು ಬೇರೆ ಪದ ಉಪಯೋಗಿಸಲ್ಲ ಎಂದು ಸ್ಪಷ್ಟಪಡಿಸಿದರು.