ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಕೊರೊನಾ ಅಸ್ತ್ರ ಪ್ರಯೋಗಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಶಾಕ್ ನೀಡಿದೆ. ಕೊರೊನಾ ಅಕ್ರಮದ ಬಳಿಕ ಇದೀಗ ಕೆಕೆಆರ್ ಡಿಬಿ ಅವ್ಯವಹಾರದ ಬಗ್ಗೆ ತನಿಖೆಗಾಗಿ ಸಮಿತಿ ರಚಿಸಿದೆ. ಕಲ್ಯಾಣ-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್ಡಿಬಿ)ಯಲ್ಲಿ ಸುಮಾರು 300 ಕೋಟಿ ಅನುದಾನ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ತನಿಖೆಗೆ ಸರ್ಕಾರ ಕಮಿಟಿ ರಚಿಸಿದೆ.
ನಾನು ತಪ್ಪು ಮಾಡಿದ್ದರೆ ರಕ್ತಕಾರಿ ಸಾಯುವೆ : ಅತ್ಯಾಚಾರ ಪ್ರಕರಣದ ಆರೋಪಿ ಮುನಿರತ್ನ ಹೇಳಿದಿಷ್ಟು..
2020-2023ರ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘ ರಚಿಸಲಾಗಿತ್ತು. ಈ ವೇಳೆ ದತ್ತಾತ್ರೇಯ ಪಾಟೀಲ್ ರೇವೂರ್ ಅಧ್ಯಕ್ಷರಾಗಿದ್ದರು. ಆಗ ಯಡಿಯೂರಪ್ಪ ಸಿಎಂ ಆಗಿದ್ದರು. ಪ್ರತಿ ವರ್ಷ 100 ಕೋಟಿಯಂತೆ 300 ಕೋಟಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ಅನುದಾನದಲ್ಲಿ ದುರ್ಬಳಕೆ ಆಗಿದೆ ಎನ್ನುವ ಆರೋಪ ಕೇಳಿಬಂದಿತ್ತು. ಈಗ ಅಕ್ರಮದ ತನಿಖೆ ನಡೆಸಲು ನಿವೃತ್ತ ಐಎಎಸ್ ಸುಧೀರ್ ಕುಮಾರ್ ನೇತೃತ್ವದಲ್ಲಿ ಸಮಿತಿ ರಚಿಸಸಲಾಗಿದೆ. ಕೋವಿಡ್ ಅವಧಿಯಲ್ಲಿ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ ಪರಿಹಾರ ವಿತರಣೆ, ದೇಶಿ ಹಸು ಸಾಕಣೆಗೆ ಪ್ರೋತ್ಸಾಹ ಧನ ವಿತರಣೆ, 1 ಕೋಟಿ ಸಸಿ ನೆಟ್ಟಿರುವ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.