ಚನ್ನಪಟ್ಟಣ:- ಉಪಚುನಾವಣೆ ಹಿನ್ನೆಲೆ, ಚನ್ನಪಟ್ಟಣದಲ್ಲಿ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ ಗಮನ ಸೆಳೆದಿದೆ.
ಬೆಳಗಿನ ಜಾವ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಉತ್ತಮ ಪ್ರತಿಕ್ರಿಯೆ ಇದೆ.
ಶಿಗ್ಗಾವಿ ಉಪಚುನಾವಣೆ: ಮತದಾನಕ್ಕೂ ಮುನ್ನ ದೇವರ ಮೊರೆ ಹೋದ ಬೊಮ್ಮಾಯಿ ಕುಟುಂಬ!
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 276 ಮತಗಟ್ಟೆಗಳ ಸ್ಥಾಪನೆ ಮಾಡಗಿದೆ. ನಗರ ಪ್ರದೇಶದಲ್ಲಿ 62, ಗ್ರಾಮೀಣ ಪ್ರದೇಶದಲ್ಲಿ 214 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. 276 ಮತಗಟ್ಟೆಗಳಲ್ಲಿ ಆಯೋಗ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಿದೆ. 276 ಮತಗಟ್ಟೆಗಳ ಪೈಕಿ 119 ಮತಗಟ್ಟೆಗಳನ್ನು ಸೂಕ್ಷ್ಮವೆಂದು ಗುರುತಿಸಲಾಗಿದೆ. ಚುನಾವಣಾ ಆಯೋಗ 119 ಮೈಕ್ರೋ ಅಬ್ಸರ್ವರ್ಸ್ ನಿಯೋಜಿಸಲಾಗಿದೆ.
ಚನ್ನಪಟ್ಟಣ ಗೊಂಬೆಗಳಿಗೆ ವಿಶ್ವ ವಿಖ್ಯಾತಿ ಪಡೆದಿದೆ. ಇಲ್ಲಿನ ಗೊಂಬೆಗಳಿಗೆ ಭಾರಿ ಬೇಡಿಕೆ ಇದೆ. ಹೀಗಾಗಿ ಚುನಾವಣಾ ಆಯೋಗ ಗೊಂಬೆ ಮತಗಟ್ಟೆ ನಿರ್ಮಾಣ ಮಾಡಿದೆ. ಈ ಮೂಲಕ ಚನ್ನಪಟ್ಟಣ ಗೊಂಬೆಗಳ ವಿಶೇಷ ಪ್ರಾಶಸ್ತ್ಯ ನೀಡಿದೆ.
ಚನ್ನಪಟ್ಟಣದ ಕೋಟೆ ಬಡಾವಣೆಯಲ್ಲಿ ವಿಶೇಷ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ ನಿರ್ಮಿಸಲಾಗಿದೆ. ಮತಗಟ್ಟೆ ಹೊರಭಾಗದಲ್ಲಿ ಆಕರ್ಷಕ ಬಲೂನ್ ಕಮಾನು, ಗೊಂಬೆಗಳ ಫ್ಲೆಕ್ಸ್ ಅಳವಡಿಸಲಾಗಿದೆ. ಮತದಾನ ಮಾಡಲು ಬಂದಿರುವ ಮತದಾರರು ಗೊಂಬೆ ಮತಗಟ್ಟೆ ಕಂಡು ಹರ್ಷಗೊಂಡಿದ್ದಾರೆ.
ಗೊಂಬೆ ಮತಗಟ್ಟೆ ಒಳಗೆ ಗೊಂಬೆಗಳನ್ನು ಕೂರಿಸಲಾಗಿದೆ. ಚನ್ನಪಟ್ಟಣದ ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ ಮಾಡಲಾಗುತ್ತಿದೆ. ಮರದಿಂದ ತಯಾರಿಸಿದ ರೈತರ ಜೀವನಾಡಿ ಎತ್ತಿನ ಗಾಡಿ, ರಾಜ, ರಾಣಿ ಗೊಂಬೆಗಳು, ಮಕ್ಕಳ ಆಟಿಕೆಗಳು, ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ, ಅರಮನೆ ಮತ್ತು ಶ್ರೀರಾಮ ಮಂದಿರ ಸೇರಿ ವಿವಿಧ ಗೊಂಬೆಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.