ಶಿವಮೊಗ್ಗ: ಕಾಂಗ್ರೆಸ್ʼನವರು ವೋಟಿಗಾಗಿ ಭಾರತವನ್ನೇ ಮತಾಂತರ ಮಾಡಲು ಹೊರಟ್ಟಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಕೊಡುತ್ತೇವೆ ಎನ್ನುತ್ತಾರೆ. ಹಿಂದೂಸ್ಥಾನ ಏನು ಪಾಕಿಸ್ತಾನ ಮಾಡಲು ಹೊರಟ್ಟಿದ್ದೀರಾ? ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳುತ್ತಾರೆ. ಬಾಂಗ್ಲಾದೇಶದಲ್ಲಿ ಹಲ್ಲೆ, ಕೊಲೆ ಆಯ್ತು. ಬಾಂಗ್ಲಾದೇಶದ ಪ್ರಧಾನಿಗೆ ಭಾರತದಲ್ಲಿ ರಕ್ಷಣೆ ಕೊಟ್ಟು ಇಟ್ಟಿದ್ದೇವೆ.
ಪಾಕಿಸ್ತಾನದಲ್ಲಿ ಹಿಂದೂಗಳ ಹತ್ಯೆಯಾಯ್ತು. ಭಾರತದಲ್ಲಿಯೂ ಮುಸ್ಲಿಂರು ಈ ರೀತಿ ಮಾಡಲು ಹೊರಟ್ಟಿದ್ದಾರೆ. ಕಾಂಗ್ರೆಸ್ನವರು ವೋಟಿಗಾಗಿ ಭಾರತವನ್ನೇ ಮತಾಂತರ ಮಾಡಲು ಹೊರಟ್ಟಿದ್ದಾರೆ. ನೇರಾ ನೇರ ಖಂಡನೆ ಮಾಡಬೇಕು. ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ಅವರ ಮೀಸಲಾತಿ ಕಿತ್ತುಕೊಳ್ಳಲು ಹೊರಟ್ಟಿದ್ದಾರೆ. ಹಿಂದೂ ಸಮಾಜ ದಂಗೆ ಎದ್ದರೆ ಈ ಸರ್ಕಾರ, ನೀವೇ ಕಾರಣರಾಗುತ್ತೀರಿ ಎಂದು ಎಚ್ಚರಿಕೆ ನೀಡಿದರು.
Health Tips: ಈರುಳ್ಳಿ ತಿಂದಾಗ ಬಾಯಿ ವಾಸನೆ ಬರುತ್ತಾ..? ನಿವಾರಣೆಗೆ ಹೀಗೆ ಮಾಡಿ
ವಕ್ಫ್ ನೋಟಿಸ್ ವಾಪಸ್ ತೆಗೆದುಗೊಂಡಿದ್ದೇವೆ ಎಂದು ಹೇಳುತ್ತಾರೆ ಆದರೆ ಸಿಎಂ, ಡಿಸಿಎಂ ಈ ಬಗ್ಗೆ ನ್ಯಾಯ ಕೊಡಿಸುತ್ತೇವೆ ಎಂದು ಹೇಳುವುದಿಲ್ಲ. ವಿಪಕ್ಷಗಳು ರಾಜಕಾರಣ ಮಾಡುತ್ತೇವೆ ಎಂದು ಹೇಳಿ ರಾಜಕಾರಣ ಮಾಡುತ್ತಿದ್ದಾರೆ. ಅಂಬೇಡ್ಕರ್ ಇಸ್ಲಾಂ ಧರ್ಮ ಸ್ವೀಕಾರ ಮಾಡಲು ಸಿದ್ಧರಿದ್ದರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾನೆ. ಆದರೆ ಈ ಬಗ್ಗೆ ಒಬ್ಬ ಕಾಂಗ್ರೆಸ್ ನಾಯಕನೂ ಖಂಡಿಸಲಿಲ್ಲ ಎಂದು ಕಿಡಿಕಾರಿದರು.