ಧಾರವಾಡ: ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣದ 97 ಮಂದಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠವು ಜಾಮೀನು ಮಂಜೂರು ಮಾಡಿದೆ. ಕೊಪ್ಪಳ ಜಿಲ್ಲಾ ನ್ಯಾಯಾಲಯವು 97 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಜೈಲು ಪಾಲಾಗಿದ್ದವರು ಹೈಕೋರ್ಟ್ ಮೊರೆ ಹೋಗಿದ್ದರು .
Health Tips: ಈರುಳ್ಳಿ ತಿಂದಾಗ ಬಾಯಿ ವಾಸನೆ ಬರುತ್ತಾ..? ನಿವಾರಣೆಗೆ ಹೀಗೆ ಮಾಡಿ
ಈ ಕುರಿತು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠವು 98 ಅಪರಾಧಿಗಳ ಪೈಕಿ 97 ಜನರಿಗೆ ಜಾಮೀನು ಮುಂಜೂರು ಮಾಡಿ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ಹಾಕದ ಎ1 ಮಂಜುನಾಥ ಹೊರತು ಪಡಿಸಿ ಉಳಿದೆಲ್ಲರಿಗೂ ಜಾಮೀನು ಮುಂಜೂರು ಮಾಡಿದೆ.