ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಹೌದು ಹಗರಣದ ತನಿಖೆಯನ್ನು ಕೇಂದ್ರಕ್ಕೆ ವರ್ಗಾಯಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ ಸೆಕ್ಷನ್ 35 ಎ ಅಡಿಯ ವ್ಯಾಖ್ಯಾನ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಲಾಗುವುದಿಲ್ಲ. ಒಂದು ವೇಳೆ ಅನುಮತಿ ನೀಡಿದರೆ ಎಲ್ಲಾ ಬ್ಯಾಂಕ್ಗಳೂ ಇದನ್ನೇ ಕೇಳಬಹುದು. ಆಗ ದೆಹಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆ್ಯಕ್ಟ್ ನಿರರ್ಥಕವಾಗಬಹುದು ಎಂದು ಅರ್ಜಿ ತಿರಸ್ಕರಿಸಿ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.
Health Tips: ಈರುಳ್ಳಿ ತಿಂದಾಗ ಬಾಯಿ ವಾಸನೆ ಬರುತ್ತಾ..? ನಿವಾರಣೆಗೆ ಹೀಗೆ ಮಾಡಿ
ಹಗರಣದ ತನಿಖೆ ಹೊಣೆ ಸಿಬಿಐಗೆ ವರ್ಗಾಯಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನಂತರ ಹೈಕೋರ್ಟ್ ಸೆಪ್ಟೆಂಬರ್ 30 ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಯೂನಿಯನ್ ಬ್ಯಾಂಕ್ ಅರ್ಜಿಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಅಧಿಕಾರ ರಾಜ್ಯ ಪೊಲೀಸರಿಗೆ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು.
ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಬಿ. ವಿ. ಆಚಾರ್ಯ, ಬ್ಯಾಂಕ್ ಸಲ್ಲಿಸಿರುವ ಅರ್ಜಿಯ ನಿರ್ವಹಣೆಯ ಬಗ್ಗೆ ಪ್ರಾಥಮಿಕ ಆಕ್ಷೇಪಣೆ ಎತ್ತಿದ್ದಾರೆ. ಪ್ರಕರಣದ ತನಿಖೆ ಅಧಿಕಾರವು ರಾಜ್ಯ ಪೊಲೀಸರದ್ದಾಗಿರುತ್ತದೆ. ಇದು ಶಾಸನಬದ್ಧ ಅಧಿಕಾರವಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಹೇಳಿದ್ದಾರೆ.