ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಥವಾ ಮುಡಾದಲ್ಲಿ ಅಕ್ರಮದ ಆರೋಪ ಕೇಳಿಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನೂ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
Jio Offer: ಜಿಯೋ ಬಳಕೆದಾರರಿಗೆ ಗುಡ್ ನ್ಯೂಸ್! ಅತಿ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್!
ಸಿಎಂ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡದ ನಿವೇಶನ ಕ್ರಯಪತ್ರದ ಮುದ್ರಾಂಕ ಶುಲ್ಕದ ಬಗ್ಗೆ ಸ್ನೇಹಮಯಿ ಕೃಷ್ಣ ಆಕ್ಷೇಪ ವ್ಯಕ್ತಪಡಿಸಿದರು. ಇದನ್ನು ಖಂಡಿಸಿದ ಲಕ್ಷ್ಮಣ್ ಅವರು ಸ್ನೇಹಮಯಿ ಕೃಷ್ಣ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಸಿಎಂ ವಿರುದ್ಧ ಪ್ರತಿ ನಿತ್ಯ ಒಂದಲ್ಲೊಂದು ಆರೋಪ ಮಾಡಿ ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಲಕ್ಷ್ಮಣ್ ದೂರು ನೀಡಿದ್ದರು. ದೂರು ನೀಡಿದ ಮರುದಿನವೇ ದೇವರಾಜ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.