ಬೆಂಗಳೂರು:- ಬೆಂಗಳೂರಿನ ಪ್ರಸಿದ್ಧ ಬಸವನಗುಡಿ, ಮಲ್ಲೇಶ್ವರಂ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ ಆಗಿದೆ.
ಎರಡು ದಿನಗಳ ಕಾಲ ಈ ಪರಿಷೆ ನಡೆಸಲು ಮುಜರಾಯಿ ಇಲಾಖೆ ನಿಗದಿ ಮಾಡಿದೆ. ಈ ಬಾರಿಯ ಕಡಲೆಕಾಯಿ ಪರಿಷೆ ಹಲವು ವಿಶೇಷತೆಗಳಿಂದ ಕೂಡಿರಲಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಬಸವನಗುಡಿ ಕಡಲೆಕಾಯಿ ಪರಿಷೆ ಮಾಡಲು ಮುಜರಾಯಿ ಇಲಾಖೆ ನಿರ್ಧರಿಸಿದೆ. ನವೆಂಬರ್ 25 ಮತ್ತು 26ರಂದು ಎರಡು ದಿನಗಳ ಕಾಲ ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ. ಈ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳ ಜೊತೆ ಸಭೆ ಮಾಡಿ ಹಲವಾರು ಸಲಹೆ ಸೂಚನೆ ನೀಡಿದ್ದಾರೆ
ಇನ್ನೂ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ನವೆಂಬರ್ 15 ರಿಂದ 3 ದಿನಗಳ ಕಾಲ ನಡೆಯಲಿದೆ. ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತವಾಗಿ ಮಾಡಲು ನಿರ್ಧರಿಸಲಾಗಿದೆ. ಪರಿಷೆಗೆ ಬರುವವರು ಮತ್ತು ವ್ಯಾಪಾರಸ್ಥರು ಪ್ಲಾಸ್ಟಿಕ್ ಬಿಟ್ಟು, ಬಟ್ಟೆ ಚೀಲವನ್ನೆ ಬಳಸಬೇಕು ಎಂಬ ನಿಯಮ ಜಾರಿ ಮಾಡಲಾಗುತ್ತದೆ. ಇನ್ನು ಈ ಪರಿಷೆಯಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯಲಿವ.