ಮೈಸೂರು:ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಪಾಲಿಕೆ ನೌಕರ ವಜಾ ಮಾಡಲಾಗಿದೆ.
ದಲಿತರ ಮೇಲಿನ ದೌರ್ಜನ್ಯ ಕೇಸ್: 99 ಅಪರಾಧಿಗಳಿಗೆ ಜಾಮೀನು ಸಿಕ್ಕರೂ ರಿಲೀಸ್ ಭಾಗ್ಯ ಇಲ್ಲ!
ಬಿ.ಕೆ.ಕುಮಾರ್ನನ್ನು ವಜಾ ಮಾಡಿ ಮೈಸೂರು ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ಆದೇಶ ಹೊರಡಸಿದ್ದಾರೆ.
ಬಿ.ಕೆ.ಕುಮಾರ್ ಹೆಚ್ಚುವರಿ ಕೆಲಸಕ್ಕಾಗಿ ಮುಡಾಗೆ ನೇಮಕವಾಗಿ ಬಂದಿದ್ದನು. ಮುಡಾದಲ್ಲಿ ಕೆಲಸ ಮಾಡುತ್ತಾ ಪಾಲಿಕೆಯಿಂದಲೂ ಸಂಬಳ ಪಡೆಯುತ್ತಿದ್ದನು. ಕುಮಾರ್ ಏಕಕಾಲದಲ್ಲಿ ಎರಡು ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುತ್ತಿದ್ದನು. ನಿಯಮ ಉಲ್ಲಂಘಿಸಿ ಎರಡು ಕಡೆ ವೇತನ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಕುಮಾರ್ನನ್ನು ವಜಾ ಮಾಡಲಾಗಿದೆ.
ಮುಡಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಕ್ರಮಗಳಲ್ಲಿ ಭಾಗಿಯಾಗಿದ್ದ ಎಂಬ ಆರೋಪ ಕೇಳಿಬಂದಿದೆ. ಹಿಂದಿನ ಆಯುಕ್ತರಿಗೆ ಖಾಲಿ ನಿವೇಶನಗಳ ಬಗ್ಗೆ ಮಾಹಿತಿ ಹಾಗೂ ಮಂಜೂರಾತಿ ಮಾಡಲು ಅಗತ್ಯವಿದ್ದ ದಾಖಲೆ ತಂದು ಕೊಡುತ್ತಿದ್ದನು ಎಂಬ ಆರೋಪ ಕುಮಾರ್ ಮೇಲಿದೆ.
ಹೀಗಾಗಿ ಕ್ರಮ ಕೈಗೊಳ್ಳಲಾಗಿದೆ.