ಬೆಳಗಾವಿ: ಬೆಂಗಳೂರಿಗೆ ನೀಡಿದಷ್ಟು ಬೆಳಗಾವಿಗೂ ಹೆಚ್ಚಿನ ಆದ್ಯತೆ ಕೊಡುತ್ತೇವೆ. ಬೆಳಗಾವಿ ಸೇರಿ ರಾಜ್ಯಾದ್ಯಂತ 39 ಸಾವಿರ ಕೋಟಿ ರೂ. ಅನುದಾನದಲ್ಲಿ ರೈಲ್ವೆ ಕಾಮಗಾರಿಗಳ ಕೆಲಸ ಆರಂಭಿಸಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದರು.
ಬೆಳಗಾವಿ-ಧಾರವಾಡ ನೇರ ರೈಲ್ವೆ ಮಾರ್ಗ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗ ದಿ. ಸುರೇಶ್ ಅಂಗಡಿ ಅವರ ಕನಸಾಗಿದೆ. ರೈಲು ಹಳಿ ನಿರ್ಮಾಣಕ್ಕೆ ಒಟ್ಟು 888 ಎಕರೆ ಜಮೀನು ಬೇಕಾಗುತ್ತದೆ. ಬೆಳಗಾವಿ ಜಿಲ್ಲೆಯಲ್ಲಿ 660 ಎಕರೆ, ಧಾರವಾಡದಲ್ಲಿ 228 ಎಕರೆ ಜಮೀನು ಬೇಕು.
ರೈತರೇ ಗಮನಿಸಿ.. ಕಡಿಮೆ ಬಂಡವಾಳ, ಅಧಿಕ ಲಾಭ! ಈ ಬೆಳೆಯಿಂದ ಲಕ್ಷಗಟ್ಟಲೆ ಲಾಭ ಪಡೆಯಬಹುದು!
446 ಎಕರೆ ಜಮೀನನ್ನು ಮುಂದಿನ ತಿಂಗಳು ಹಸ್ತಾಂತರ ಮಾಡುವ ಬಗ್ಗೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಮಾರ್ಗ ಸುಮಾರು 73 ಕಿ.ಮೀ. ವ್ಯಾಪ್ತಿ ಹೊಂದಿದ್ದು, ಧಾರವಾಡದ ಕ್ಯಾರಕೊಪ್ಪದಿಂದ ಬೆಳಗಾವಿ ದೇಸೂರದವರೆಗೆ ರೈಲು ಹಳಿ ಮಾಡುವ ಗುರಿ ಇದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಅಭಿವೃದ್ಧಿ ಮಾಡಬಹುದು. ಜಿಲ್ಲಾಧಿಕಾರಿಗಳು ಒಂದು ವರ್ಷದ ಕೆಲಸವನ್ನು ಒಂದು ತಿಂಗಳಲ್ಲಿ ಮಾಡಿದ್ದಾರೆ ಎಂದು ಶ್ಲಾಘಿಸಿದರು.