ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಆರೋಪಿ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ದರ್ಶನ್ ಮಧ್ಯಂತರ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ.
ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಎಸ್ ಐಟಿ ಯಿಂದ ಇನ್ಸ್ಪೆಕ್ಟರ್ ವಿಚಾರಣೆ
ಹೈಕೋರ್ಟ್ ವೈದ್ಯಕೀಯ ಚಿಕಿತ್ಸೆಗಾಗಿ ದರ್ಶನ್ ಗೆ 6 ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಈಗಾಗಲೇ ಜಾಮೀನು ಸಿಕ್ಕು ಮೂರು ವಾರಗಳೇ ಕಳೆದಿವೆ. ಈಗ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲು ಪೊಲೀಸರು ಮುಂದಾಗಿದ್ದು, ಸರ್ಕಾರ ಸಹ ಮೇಲ್ಮನವಿ ಸಲ್ಲಿಕೆಗೆ ಅನುಮತಿ ನೀಡಿದೆ. ಹೀಗಾಗಿ ಎಸ್ ಪಿಪಿ ಪ್ರಸನ್ನಕುಮಾರ್ ಮೇಲ್ಮನವಿ ಅರ್ಜಿ ಸಿದ್ದಪಡಿಸಿದ್ದು, ಪೊಲೀಸ್ ಇಲಾಖೆಗೆ ಅರ್ಜಿ ಪ್ರತಿಯನ್ನು ನೀಡಿದ್ದಾರೆ. ಮತ್ತೊಂದೆಡೆ ಪೋಲೀಸರಿಂದ ಕೆಲ ದಾಖಲೆಗಳ ಭಾಷಾಂತರ ಕಾರ್ಯ ನಡೆಯುತ್ತಿದ್ದು, ದಾಖಲೆಗಳ ಭಾಷಾಂತರ ಕೆಲಸ ಮುಗಿದ ಬಳಿಕ ಎಸ್ಎಲ್ಪಿ ಸಲ್ಲಿಕೆಗೆ ಸಿದ್ದತೆ ನಡೆಸಲಾಗುತ್ತಿದ್ದು, ಸೋಮವಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.