ಬೆಂಗಳೂರು: ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೂ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳೂ ಸೇರಿವೆ. ಈ ಪೈಕಿ ಗರ್ಣಿಯರಿಗಾಗಿಯೇ ವಿಶೇಷ ಯೋಜನೆ ಲಭ್ಯವಿದೆ ಎಂಬುದು ಗಮನಾರ್ಹ. ಈ ಯೋಜನೆಯನ್ನು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಎಂದು ಕರೆಯಲಾಗುತ್ತದೆ. ಈ ಯೋಜನೆಯಡಿ ಈಗಾಗಲೇ ಲಕ್ಷಾಂತರ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ
ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯಡಿಯಲ್ಲಿ ಈ ಲಾಭವನ್ನು ಪಡೆಯಬಹುದಾಗಿದೆ. ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ. ಗರ್ಭಿಣಿ ಆದಾಗ ಮತ್ತು ಜನ್ಮ ನೀಡಿದ ನಂತರ ಬೇರೆ ಬೇರೆ ಕಂತುಗಳಲ್ಲಿ ಒಟ್ಟು 11,000 ಆರ್ಥಿಕ ನೆರವು ನೀಡಲಾಗುತ್ತದೆ. ಮಾತೃತ್ವ ವಂದನಾ ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು 2017 ರ ಬಜೆಟ್ ನಲ್ಲಿ ಘೋಷಣೆ ಮಾಡಿದರು.
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಉಚಿತ ‘ಹೊಲಿಗೆ ಯಂತ್ರ’!
ಬೇರೆ ಬೇರೆ ಮೂರು ಕಂತುಗಳಲ್ಲಿ 11 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು ಜೊತೆಗೆ ಮಹಿಳೆಯರ ಖಾತೆಗೆ ನೇರವಾಗಿ ಈ ಹಣವನ್ನ ವರ್ಗಾವಣೆ ಮಾಡಲಾಗುತ್ತದೆ. ಮಾತೃತ್ವ ವಂದನಾ ಯೋಜನೆಯ ಅಡಿಯಲ್ಲಿ ಹಣಕಾಸಿನ ನೆರವಿನ ಜೊತೆಗೆ ಗರ್ಭಿಣಿ ಸ್ತ್ರೀಗೆ ಉಚಿತ ಔಷಧಿ ಗರ್ಭಧಾರಣೆಯ ಪೂರ್ವ ಮತ್ತು ನಂತರದ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಕೂಡ ಉಚಿತವಾಗಿ ಒದಗಿಸಲಾಗುತ್ತದೆ.
ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಎರಡು ಕಂತುಗಳಲ್ಲಿ ಹಣವನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗುವುದು. ಮಹಿಳೆ ಮೊದಲ ಬಾರಿಗೆ ತಾಯಿಯಾದರೆ 5000 ಹಾಗೂ ಎರಡನೇ ಬಾರಿಗೆ ಹೆಣ್ಣು ಮಗುವಿಗೆ ಜನರ ನೀಡಿದರೆ 6,000 ಗಳನ್ನು ನೀಡಲಾಗುವುದು. ಇನ್ನು 5,000 ಗಳನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ. ಮೊದಲನೆಯದಾಗಿ anc ಮಾಡಿದ ನಂತರ 3000 ಹಾಗೂ ಜನನ ನೋಂದಣಿ ಆಗಿ ಮಗುವಿಗೆ ಮೊದಲ ಲಸಿಕೆ ಕೊಟ್ಟ ನಂತರ 2000 ಕೊಡಲಾಗುವುದು. ಆದರೆ ಎರಡನೇ ಹೆಣ್ಣು ಮಗುವಿಗೆ ಜನನ ನೀಡಿದರೆ ಜನನ ಆದ ಬಳಿಕ 6,000 ಗಳನ್ನು ಒಂದೇ ಬಾರಿಗೆ ಖಾತೆಗೆ ವರ್ಗಾವಣೆ ಮಾಡಲಾಗುವುದು.
ಹಾಗಾದರೆ ಯಾರಿಗೆ ಸಿಗುತ್ತೆ ಆರ್ಥಿಕ ನೆರವು?
* ಭಾರತೀಯ ನಾಗರಿಕರಾಗಿರಬೇಕು
* 19 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳಿಗೆ ಸಿಗುತ್ತದೆ
* ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ಮಾತ್ರ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯಬಹುದು
* ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಸಹಾಯಕಿಯರು ಆಶಾ ಕಾರ್ಯಕರ್ತೆಯರು ಕೂಡ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆದುಕೊಳ್ಳುತ್ತಾರೆ.
ಅರ್ಜಿ ಸಲ್ಲಿಸುವುದು ಹೇಗೆ?:
ನಿಮ್ಮ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಅಥವಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಗರ್ಭಿಣಿ ಆಗಿರುವುದರ ಬಗ್ಗೆ ಮೆಡಿಕಲ್ ಸರ್ಟಿಫಿಕೇಟ್ ಒದಗಿಸಿದರೆ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡು ಹಣವನ್ನು ಖಾತೆಗೆ ಬರುವಂತೆ ಮಾಡಬಹುದು.
ಇನ್ನು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಾದರೆ https://pmmvy.wcd.gov.in/Account/Login ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುದು?;
* ಆಧಾರ್ ಕಾರ್ಡ್
* ಜನನ ಪ್ರಮಾಣ ಪತ್ರ
* ಆದಾಯ ಪ್ರಮಾಣ ಪತ್ರ
* ಪಾನ್ ಕಾರ್ಡ್
* ಬ್ಯಾಂಕ್ ಖಾತೆಯ ವಿವರ
* ಪಾಸ್ ಪೋರ್ಟ್ ಅಳತೆಯ ಫೋಟೋ
ಇವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ
ಮಾತೃ ವಂದನಾ ಯೋಜನೆ ಕೆಲವು ಜನರಿಗೆ ಅನ್ವಯಿಸುವುದಿಲ್ಲ ಎಂಬುದನ್ನು ಗಮನಿಸಬೇಕು. ಈ ಯೋಜನೆಯು ಎರಡನೇ ಪರಿಕಲ್ಪನೆಗೆ ಅನ್ವಯಿಸುವುದಿಲ್ಲ. ಹಾಗಾಗಿ ಹಣ ಬರುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗ ಮಾಡುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ. ಅಂದರೆ ಮಹಿಳೆಯರು ಸರ್ಕಾರಿ ಕೆಲಸ ಮಾಡುತ್ತಿದ್ದರೆ ಯೋಜನೆಗೆ ಸೇರಲು ಸಾಧ್ಯವಾಗುವುದಿಲ್ಲ.