ದೊಡ್ಡಬಳ್ಳಾಪುರ:- ಎಸಿ ಕಚೇರಿಯಲ್ಲಿ ವಿದ್ಯುತ್ ಇಲ್ಲದೆ ಸಾರ್ವಜನಿಕರು ಪರದಾಟ ನಡೆಸಿದ ಘಟನೆ ದೊಡ್ಡಬಳ್ಳಾಪುರದಲ್ಲಿ ಜರುಗಿದೆ.
Muda Scam: ಮುಡಾ ಸೇವೆಗಳು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ- ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಆದೇಶ!
ಕಳೆದ ಮೂರು ದಿನಗಳಿಂದ ವಿದ್ಯುತ್ ಇಲ್ಲದೆ ಸಾರ್ವಜನಿಕರು ಪರದಾಟ ಮಾಡಿದ್ದಾರೆ. ಒಂದೇ ಕಟ್ಟಡದಲ್ಲಿರುವ ಎಸಿ ಕಚೇರಿ, ತಾಲೂಕು ಆಫೀಸ್ ಮತ್ತು ಉಪನೊಂದಣಾಧಿಕಾರಿಗಳ ಕಚೇರಿ ಇದ್ದು, ಮೂರು ದಿನಗಳಿಂದ ಕರೆಂಟ್ ಇಲ್ಲದೆ ಕೆಲಸ ಏನೂ ನಡೆಯುತ್ತಿಲ್ಲ.
ಯಾವುದೇ ನೋಟೀಸ್ ಹೊರಡಿಸಿದೆ ಎಸಿ ದುರ್ಗಾಶ್ರೀ ನಿರ್ಲಕ್ಷ್ಯ ತೋರಿದ್ದಾರೆ. ಹೊಸಕೋಟೆ, ನೆಲಮಂಗಲ ದೇವನಹಳ್ಳಿಯಿಂದ ಕೆಲಸಕ್ಕಾಗಿ ಸಾರ್ವಜನಿಕರು ಬಂದು ವಾಪಸ್ ಹೋಗುತ್ತಿದ್ದಾರೆ. ಮೂರು ದಿನಗಳು ಕಳೆದರೂ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ಎಸಿ ನಿರ್ಲಕ್ಷ್ಯ ತೋರಿದ್ದಾರೆ.
ಕನಿಷ್ಠ ಸಾರ್ವಜನಿಕರಿಗೆ ಮಾಹಿತಿ ನೀಡಲು ಎಸಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಎಸಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಪಾಣಿ, ಮ್ಯುಟೇಷನ್, ಜನನ ಮರಣ ಪ್ರಮಾಣ ಪತ್ರ ಜೊತೆಗೆ ಯಾವುದೇ ಕೆಲಸಗಳು ನಡೆಯುತ್ತಿಲ್ಲ ಎನ್ನಲಾಗಿದೆ.