ಹುಬ್ಬಳ್ಳಿ:– ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪರಿಷತ್ ಮಾಜಿ ಸದಸ್ಯೆ ಸಾವಿತ್ರಮ್ಮ ಗುಂಡಿ ಶುಕ್ರವಾರ ವಿಧಿವಶರಾಗಿದ್ದಾರೆ.
ಕಲ್ಲಿನಿಂದ ಹೊಡೆದು ಹಿಂದೂ ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಕೊನೆ ಇಲ್ವಾ!?
ಶುಕ್ರವಾರ ಸಂಜೆ ಹುಬ್ಬಳ್ಳಿಯ ಜೆಸಿ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.
ಸಾವಿತ್ರಿ ಗುಂಡಿ ಅವರು ಕರ್ನಾಟಕ ರಾಜ್ಯ ಸಂಯುಕ್ತ ಜನತಾ ದಳ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾಗಿದ್ದರು. ಅಲ್ಲದೇ ವಕೀಲರು, ವಿಧಾನ ಪರಿಷತ್ ಮಾಜಿ ಸದಸ್ಯೆ ಆಗಿಯೂ ಕೆಲಸ ನಿರ್ವಹಿಸಿದರು. ಮೃತರಿಗೆ ಸಾಕಷ್ಟು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 1 ಕ್ಕೆ ಮಂಟೂರು ರಸ್ತೆಯಲ್ಲಿನ ಕಲಬುರಗಿ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ.