ಬೆಳಗಾವಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಹೌದು ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿಯ ವಡ್ಡರವಾಡಿಯಲ್ಲಿ ನಡೆದಿದೆ. ಮಗಳು ವೇಶಾವಾಟಿಕೆ ಮಾಡ್ತಿದ್ದಾಳೆ ಅಂತಾ ಆರೋಪಿಸಿ ಮನೆಗೆ ನುಗ್ಗಿ ಎಳೆದು ತಂದು ತಾಯಿ, ಮಗಳ ಮೇಲೆ ಹಲ್ಲೆ ಮಾಡಿದ್ದಾರೆ.
ಮನೆಯ ಪಕ್ಕದ ಅಷ್ಟೇಕರ್ ಕುಟುಂಬದಿಂದ ಹಲ್ಲೆ ಆರೋಪ ಕೇಳಿ ಬಂದಿದ್ದು, ಪಕ್ಕದಲ್ಲಿ ವಾಸವಿರುವ ಮತ್ತೊಂದು ಕುಟುಂಬದವರು, ಮಹಿಳೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮನೆಗೆ ನುಗ್ಗಿ ತಾಯಿ, ಮಗಳನ್ನು ಹೊರಗೆ ಎಳೆದು ತಂದು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ.
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಉಚಿತ ‘ಹೊಲಿಗೆ ಯಂತ್ರ’!
ಸಂಬಂಧ ಇಲ್ಲದವರೆಲ್ಲಾ ಆ ಮಹಿಳೆಯರ ಮನೆಗೆ ಬಂದು ಹೋಗುತ್ತಾರೆ. ಮಹಿಳೆಯರು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ನೆರೆ ಮನೆಯವರು ತಾಯಿ-ಮಗಳನ್ನ ಮನೆ ಬಿಡಿಸಲು ಜಗಳ ತೆಗೆದಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ ಮಾಡಲಾಗಿದೆ.