ಹುಬ್ಬಳ್ಳಿ: ಬಿಜೆಪಿ ಸರಕಾರದ ಅವಧಿಯಲ್ಲಿ ಒಂದೇ ಒಂದು ಬಸ್ ಖರೀದಿಸಲಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರದ ಅವಧಿಯಲ್ಲಿ ಒಂದೇ ಒಂದು ಬಸ್ ಖರೀದಿಸಲಿಲ್ಲ. 2016 ರಿಂದ 14 ಸಾವಿರ ಸಿಬ್ಬಂದಿ ನಿವೃತ್ತಿ ಹೊಂದಿದರೂ ಒಂದೂ ನೇಮಕ ಮಾಡಲಿಲ್ಲ. ಅಲ್ಲದೇ ಪ್ರತಿ ತಿಂಗಳೂ ಸಂಬಳ ಕೂಡ ಸರಿಯಾಗಿ ಕೊಡುತ್ತಿರಲಿಲ್ಲ.
ಕಾಂಗ್ರೆಸ್ ಸರಕಾರ ಬಂದ್ಮೇಲೆ ಸಾವಿರಕ್ಕೂ ಹೆಚ್ಚು ಬಸ್ ಖರೀದಿಸುತ್ತಿದ್ದೇವೆ. 9 ಸಾವಿರ ಸಿಬ್ಬಂದಿ ನೇಮಕವಾಗಿದೆ. ಪ್ರತಿ ತಿಂಗಳು ಸಂಬಳ ಕೊಡುತ್ತಿದ್ದೇವೆ. ಇವೆಲ್ಲಕ್ಕಿಂತ ಮುಖ್ಯವಾಗಿ ಅನುಕಂಪ ನೇಮಕಕ್ಕೆ ಅವಕಾಶ ನೀಡಿರಲಿಲ್ಲ. ಸದ್ಯ ಒಂದು ಸಾವಿರ ಸಿಬ್ಬಂದಿಯನ್ನು ಅನುಕಂಪ ಆಧಾರದ ಮೇಲೆ ನೇಮಕ ಮಾಡಿದ್ದೇವೆ,” ಎಂದರು.
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಉಚಿತ ‘ಹೊಲಿಗೆ ಯಂತ್ರ’!
ಸೇವಾವಧಿಯಲ್ಲಿ ಮೃತಪಟ್ಟ ಸಿಬ್ಬಂದಿ ಕುಟುಂಬದ ಅವಲಂಬಿತರಿಗೆ ಹಿಂದೆ ಒಂದೂ ಪೈಸೆ ಪರಿಹಾರ ಕೊಟ್ಟ ಉದಾಹರಣೆ ಇಲ್ಲ. ಇದೀಗ 5 ಲಕ್ಷ ರೂ.ಪರಿಹಾರ ಕೊಡುತ್ತಿದ್ದು, ಇದನ್ನು ಬಿಎಂಟಿಸಿ ಮಾದರಿಯಲ್ಲಿ 10 ಲಕ್ಷ ರೂ.ಗೆ ಹೆಚ್ಚಿಸಲು ಚಿಂತನೆ ಇದೆ. ಇದಲ್ಲದೆ ಅನಾರೋಗ್ಯಕ್ಕೀಡಾಗುವ ಸಿಬ್ಬಂದಿ ಮತ್ತು ಕುಟುಂಬದ ಸದಸ್ಯರಿಗೆ ಸಂಸ್ಥೆ ವ್ಯಾಪ್ತಿಯ ಸರಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತದೆ,” ಎಂದರು.