ಬೆಂಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆಗಿಳಿದಿದ್ದಾರೆ. ಇಂದಿರಾ ಕ್ಯಾಂಟೀನ್ ಬಳಿಕ ಇದೀಗ ಪಿಜಿಗಳ ಮೇಲೆ ಮೆಗಾ ರೇಡ್ ನಡೆಸಿದ್ದಾರೆ. ಪಿಜಿಗಳಲ್ಲಿ ಸ್ವಚ್ಛತೆ ಕುರಿತು ಹಲವು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಇರುವ ಪಿಜಿಗಳ ಮೇಲೆ ದಾಳಿ ನಡೆಸಿದ್ದಾರೆ.
Rohit Sharma: ಹಿಟ್ ಮ್ಯಾನ್ ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ!
ದಾಳಿ ವೇಳೆ ಹಲವು ಪಿಜಿಗಳಲ್ಲಿ FSSAI ಲೈಸೆನ್ಸ್ ಇಲ್ಲದೇ ಇರುವುದು ಪತ್ತೆಯಾಗಿದೆ. ಲೈಸೆನ್ಸ್ ರಿನಿವಲ್ ಮಾಡಿಸಿಕೊಳ್ಳುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಈಗಾಗಲೇ ಹಲವು ಪಿಜಿಗಳಿಗೆ ನೋಟೀಸ್ ನೀಡಿದ್ದಾರೆ. ಅಲ್ಲದೇ ಕೆಲವೊಂದು ಪಿಜಿಗಳಿಗೆ 10-50 ಸಾವಿರದವರೆಗೆ ದಂಡ ಕೂಡ ವಿಧಿಸಿದ್ದಾರೆ. ರಾಜ್ಯಾದ್ಯಂತ 150ಕ್ಕೂ ಹೆಚ್ಚು ಪಿಜಿಗಳ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.