ಬೆಂಗಳೂರು: ಕಳೆದ 16 ದಿನಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹತ್ಯೆ ಆರೋಪಿ ದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಲೇ ಬೇಕಾದ ಅನಿವಾರ್ಯತೆಯಲ್ಲಿದ್ದಾರೆ. ಈಗಾಗಲೇ ದರ್ಶನ್ ಗೆ ಪಿಸಿಯೋಥೆರಪಿ ಮಾಡಲಾಗುತ್ತಿದೆ. ಇದರ ಜೊತೆಗೆ ಆಪರೇಷನ್ ಕೂಡ ಅಗತ್ಯ ಎನ್ನಲಾಗ್ತಿದೆ. ಸದ್ಯ ದರ್ಶನ್ ಮೆಡಿಕಲ್ ಕಂಡೀಷನ್ ಅಬ್ಸರ್ವೇಷನ್ ನಲ್ಲಿ ಇಡಲಾಗಿದೆ.
ಮೊದಲಿಗೆ ನಟ ದರ್ಶನ್ ಸೇರಿ ಕುಟುಂಬಸ್ಥರು ಸಹ ಆಪರೇಷನ್ ಬದಲಿಗೆ ಪಿಸಿಯೋಥೆರಪಿ ಗೆ ಮನವಿ ಮಾಡಿದ್ದರು. ಆದರೆ ಬಳ್ಳಾರಿ ಜೈಲಿನಲ್ಲಿದ್ದುಕೊಂಡೇ ಪಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅವಕಾಶವಿದೆ. ಆದರೆ ದರ್ಶನ್ ಗೆ ತುರ್ತು ಆಪರೇಷನ್ ಅಗತ್ಯವಿದೆ ಎಂದು ಹೈಕೋರ್ಟ್ ನಲ್ಲಿ ಬೇಲ್ ಪಡೆಯಲಾಗಿತ್ತು. ಹೀಗಾಗಿ ಜಾಮೀನಿನ ಮೇಲೆ ಹೊರಬಂದು, ಇದೀಗ ಪಿಸಿಯೋಥೆರಪಿ ಚಿಕಿತ್ಸೆಗೆ ಒಳಪಟ್ಟರೆ ಜಾಮೀನು ರದ್ದಾಗುವ ಸಾಧ್ಯತೆ ಇದೆ. ಸದ್ಯ ನಟ ದರ್ಶನ್ ಹಾಗೂ ಕುಟುಂಬಸ್ಥರು ಸಹ ಆಪರೇಷನ್ ಗೆ ಸಮ್ಮತಿಸಿದ್ದಾರೆ ಎನ್ನಲಾಗ್ತಿದೆ. ಇನ್ನೆರಡು ದಿನಗಳಲ್ಲಿ ದರ್ಶನ್ ಗೆ ಆಪರೇಷನ್ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ.