ಉತ್ತರಪ್ರದೇಶ : ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಹಿಂತಿರುವಾಗ ಈ ಘಟನೆ ನಡೆದಿದ್ದು, ನವದಂಪತಿ ಸೇರಿ ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಮದುವೆ ಸಂಭ್ರಮದಲ್ಲಿದ್ದವರು ಮಸಣ ಸೇರಿದ್ದಾರೆ.
ಹತ್ಯೆ ಆರೋಪಿ ದರ್ಶನ್ ಗೆ ಟೆನ್ಶನ್ : ಆಪರೇಷನ್ ಗೆ ಒಳಗಾಗಲೇ ಬೇಕಾದ ಅನಿವಾರ್ಯತೆ
ಶನಿವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ-74ರಲ್ಲಿ ದಟ್ಟ ಮಂಜು ಕವಿದಿತ್ತು. ಮಂಜಿನಿಂದಾಗಿ ದಾರಿ ಕಾಣದೇ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಮದುವೆ ಮುಗಿಸಿಕೊಂಡು ಬರುತ್ತಿದ್ದವರ ವಾಹನ ವೇಗವಾಗಿ ಬಂದು ಟೆಂಪೋಗೆ ಡಿಕ್ಕಿಹೊಡೆದಿದೆ. ಪರಿಣಾಮ ನವಜೋಡಿ ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘಟನೆಯಲ್ಲಿ ಸಾವನ್ನಪ್ಪಿದವರರಿಗೆ ಸಂತಾಪ ಸೂಚಿಸಿದ್ದು, ಪರಿಹಾರ ಕಾರ್ಯ ತ್ವರಿತಗೊಳಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.