ಮಂಗಳೂರು:- ಕರ್ನಾಟಕದ ಸಾಕಷ್ಟು ಜನರ ಪಡಿತರ ಚೀಟಿ ರದ್ದು ಮಾಡಲಾಗಿದೆ ಎಂಬ ವಿಪಕ್ಷದ ಆರೋಪ ವಿಚಾರವಾಗಿ ಸಚಿವ ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ನಿರುದ್ಯೋಗಿ ಯುವಕರಿಗೆ ಬಿಗ್ ಆಫರ್: 3 ತಿಂಗಳಲ್ಲಿ ಗರ್ಭಿಣಿ ಮಾಡಿದ್ರೆ ಸಿಗುತ್ತಂತೆ ಲಕ್ಷ-ಲಕ್ಷ ಸಂಬಳ!
ಈ ಸಂಬಂಧ ಮಾತನಾಡಿದ ಅವರು, ಪರಿಷ್ಕರಣೆ ಮಾಡಿದಾಗ ಬಿಪಿಎಲ್ ಅಲ್ಲದೇ ಇರೋರನ್ನು ಎಪಿಎಲ್ ಮಾಡಿದ್ದೇವೆ. ಎಪಿಎಲ್ಗೆ ಹಾಕಿದವರನ್ನು ರದ್ದು ಮಾಡುವುದಿಲ್ಲ ಎಂದರು.
ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆಗೆ ಯಾವುದೇ ತೊಂದರೆ ಇಲ್ಲ. ಎಪಿಎಲ್ನವರಿಗೆ ಸಬ್ಸಿಡಿ ರೇಟ್ನಲ್ಲಿ ಕೊಡ್ತಿದ್ದೆವು, ಹೆಚ್ಚಿನವರು ತೆಗೆದುಕೊಳ್ಳುತ್ತಿರಲಿಲ್ಲ. ಹಾಗಾಗಿ ಸದ್ಯಕ್ಕೆ ಎಪಿಎಲ್ಗೆ ಸಬ್ಸಿಡಿ ಕೊಡುವುದನ್ನು ನಿಲ್ಲಿಸಿದ್ದೇವೆ. ಪರಿಷ್ಕರಣೆ ಪೂರ್ತಿ ಆದ ಮೇಲೆ ಎಪಿಎಲ್ನವರು ಬೇಕೆಂದು ಮುಂದೆ ಬಂದ್ದರೆ ಖಂಡಿತಾ ಕೊಡುತ್ತೇವೆ ಎಂದು ತಿಳಿಸಿದ್ದಾರೆ.
ಒಂದೇ ಒಂದು ಎಪಿಎಲ್ ಕಾರ್ಡ್ ರದ್ದು ಆಗಿಲ್ಲ. ದಕ್ಷಿಣ ಭಾರತದಲ್ಲಿ ಅತೀ ಹೆಚ್ಚು ಕರ್ನಾಟಕದಲ್ಲಿ ಕಾರ್ಡ್ ಇದೆ. 6.50 ಕೋಟಿ ಜನ ಇದ್ದರೂ 4.50 ಕೋಟಿ ಜನರಿಗೆ ಕಾರ್ಡ್ ಕೊಟ್ಟಿದ್ದೇವೆ. ಅರ್ಹರಲ್ಲದವರು ಜಾಸ್ತಿ ಜನ ಇದ್ದಾರೆ ಎಂಬ ಭಾವನೆ ಬಂದಿದೆ.
ಪರಿಷ್ಕರಣೆಗೆ ನಿಯಾಮವಳಿ ಹಾಕಿಕೊಂಡಿದ್ದೇವೆ. ಈ ಹಿಂದಿನ ಸರ್ಕಾರವೇ ಈ ನಿಯಮ ಮಾಡಿದೆ. ಆದಾಯ ತೆರಿಗೆ ಕಟ್ಟುವವರಿಗೆ, ಕಾರು ಇರುವವರಿಗೆಲ್ಲಾ ಅವರನ್ನು ಎಪಿಎಲ್ಗೆ ಹಾಕುತ್ತೇವೆ. ಅವರನ್ನು ತೆಗೆದು ಹಾಕಲ್ಲ. ಪರಿಷ್ಕರಣೆ ಮಾಡುವಾಗ ಅರ್ಹರಿಗೆ ಬಿಪಿಎಲ್ ಕೊಡುತ್ತೇವೆ. ನಮ್ಮ ಬಳಿ ಇದಕ್ಕಾಗಿ 8000 ಸಾವಿರ ಕೋಟಿ ಹಣ ರೂ. ಇದೆ. ತಿಂಗಳಿಗೆ 650 ಕೋಟಿಯೇ ಖರ್ಚು ಆಗಲ್ಲ. ಕೊಡೋದಕ್ಕೆ ಯಾವುದೇ ತೊಂದರೆ ಇಲ್ಲ. ಸುನೀಲ್ ಕುಮಾರ್ ಅವರಿಗೆ ಮನವರಿಕೆ ಮಾಡುತ್ತೇವೆ ಎಂದರು.