ಮಣಿಪುರ : ಮಣಿಪುರ ಮತ್ತೆ ಪ್ರಕ್ಷುಬ್ಧವಾಗಿದ್ದು, ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೊನ್ನೆ ನಾಪತ್ತೆಯಾಗಿದ್ದ ಹಸುಳೆ ಸೇರಿದಂತೆ ಆರು ಮಂದಿ ಶವ ಪತ್ತೆಯಾದ ಬಳಿಕ ಮಣಿಪುರದಲ್ಲಿ ಜನರ ಆಕ್ರೋಶ ಹೆಚ್ಚಾಗಿದ್ದು, ಪ್ರತಿಭಟನೆ ತೀವ್ರಗೊಂಡಿದೆ. ಈ ವೇಳೆ ಆಕ್ರೋಶಿತರ ಗುಂಪು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮನೆ ಮೇಲೆ ದಾಳಿಗೆ ಯತ್ನಿಸಿದ್ದು, ಸಚಿವರು ಮತ್ತು ಶಾಸಕರ ಮನೆಗಳ ಮೇಲೆ ದಾಳಿ ನಡೆಸಿದ್ದು ನಿವಾಸಗಳನ್ನು ಧ್ವಂಸಗೊಳಿಸಿದ್ದಾರೆ. ಇಂಫಾಲ್ನ ವಿವಿಧ ಭಾಗಗಳಲ್ಲಿ ಗುಂಪನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಪ್ರಯೋಗಿಸಿದ್ದಾರೆ. ಹಿಂಸಾಚಾರ ಭುಗಿಲೇಳುತ್ತಿದ್ದಂತೆ ಇಂಫಾಲ್ನಲ್ಲಿ ಕರ್ಫ್ಯೂ ವಿಧಿಸಿದೆ. ಆರು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮಣಿಪುರದಲ್ಲಿ ಎರಡು ಚರ್ಚ್ ಸೇರಿದಂತೆ ಹಲವೆಡೆ ಬೆಂಕಿ ಹಚ್ಚಲಾಗಿದೆ. ಮೂವರು ಸಚಿವರು ಮತ್ತು ಆರು ಶಾಸಕರ ಮನೆಗಳನ್ನು ಆಕ್ರೋಶಿತರ ಗುಂಪು ಧ್ವಂಸ ಮಾಡಿದೆ.
ಗುಡ್ ನ್ಯೂಸ್: ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ!
ಕಳೆದ ವಾರ ಜಿರಿಬಾಮ್ ಜಿಲ್ಲೆಯಲ್ಲಿ ಕುಕಿ ಬುಡಕಟ್ಟು ಸಮುದಾಯದ ಹ್ಮಾರ್ ಗುಂಪಿನ 31 ವರ್ಷದ ಮಹಿಳೆಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿತ್ತು. ಬಳಿಕ ನಡೆದ ಹಿಂಸಾಚಾರದ ನಂತರ 10 ಶಸ್ತ್ರಸಜ್ಜಿತ ಕುಕಿ ಉಗ್ರರು ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದರು. ಈ ವೇಳೆಯೇ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಬಳಿಕ ಎಂಟು ತಿಂಗಳ ಹಸುಗೂಸು ಸೇರಿದಂತೆ ಆರು ಮಂದಿಯ ಶವಗಳು ನದಿಯಲ್ಲಿ ಪತ್ತೆಯಾಗಿದ್ದವು.