ನವದೆಹಲಿ: ದೀರ್ಘ ಶ್ರೇಣಿಯ ಹೈಪರ್ಸಾನಿಕ್ ಕ್ಷಿಪಣಿ ಪರೀಕ್ಷ ಯಶಸ್ವಿಯಾಗಿ ನಡೆದಿದೆ.ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಒಡಿಶಾ ಕರಾವಳಿಯ ಡಾ.ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಹೈಪರ್ಸಾನಿಕ್ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಭಾರತೀಯ ಸಶಸ್ತ್ರ ಪಡೆಗಳ ಸೇವೆಗಳಿಗಾಗಿ 1,500 ಕಿಮೀಗಿಂತ ಹೆಚ್ಚಿನ ವ್ಯಾಪ್ತಿಯ ವಿವಿಧ ರೀತಿಯ ಸಿಡಿತಲೆಗಳನ್ನು ಸಾಗಿಸಲು ಅನುವಾಗುವಂತೆ ಹೈಪರ್ ಸಾನಿಕ ಕ್ಷಿಪಣಿಯನ್ನು ವಿನ್ಯಾಸಗೊಳಿಸಲಾಗಿದೆ. ಚೀನಾ, ರಷ್ಯಾ, ಅಮೆರಿಕ ಈಗಾಗಲೇ ಈ ಹೈಪರ್ ಸಾನಿಕ್ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಿದ್ದು, ಇದೀಗ ಈ ಪಟ್ಟಿಗೆ ಭಾರತ ಸಹ ಸೇರ್ಪಡೆಯಾಗಿದೆ.
ರಾಜ್ಯದಲ್ಲಿ 60 ಪರ್ಸೆಂಟ್ ಕಮೀಷನ್ ಸರ್ಕಾರ – ವಿಪಕ್ಷ ನಾಯಕ ಆರ್. ಅಶೋಕ್ ಆರೋಪ
ಈ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಡಿಆರ್ಡಿಒವನ್ನು ಅಭಿನಂದಿಸಿದ್ದಾರೆ. ಇದೊಂದು ಐತಿಹಾಸಿಕ ಕ್ಷಣವಾಗಿದ್ದು,ಈ ಮಹತ್ವದ ಸಾಧನೆಯಿಂದ ಆಯ್ದ ದೇಶಗಳ ಸಾಲಿನಲ್ಲಿ ನಮ್ಮ ದೇಶವು ಸ್ಥಾನ ಪಡೆದಿದೆ ಎಂದು ಪೋಸ್ಟ್ ಮಾಡಿದ್ದಾರೆ.