ಬೆಳಗಾವಿ: ಅಡ್ಡಾದಿಡ್ಡಿಯಾಗಿ ಲಾರಿ ಓಡಿಸಿಕೊಂಡು ಹೊರಟಿದ್ದ ಚಾಲಕನನ್ನು ಹಿಡಿದು ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕೋಳಿ ಗ್ರಾಮದ ಬಳಿ ಘಟನೆ ನಡೆದಿದೆ. ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದ ಅಜೀಮ್ ಇಪ್ಪೇರಿ (23) ಮೃತನಾಗಿದ್ದು, ಸಂಕೇಶ್ವರದಿಂದ ಬೆಳಗಾವಿ ಕಡೆಗೆ ಲಾರಿ ಚಲಾಯಿಸಿಕೊಂಡು ಬರುತ್ತಿದ್ದ. ಕುಡಿದು ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿ ಪರಸಪ್ಪ ನಾಯಕ್ ಗೆ ಸೇರಿದ ಬೈಕ್ ಮತ್ತುಹಣಮಂತ ಇಡ್ಲಿಗೆ ಸೇರಿದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದ್ದಾನೆ.
ಕಲಘಟಗಿ ತ್ರೈಮಾಸಿಕ ಕೆಡಿಪಿ ಸಭೆ: ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಕ್ಲಾಸ್
ಎರಡು ಕಡೆ ಅಪಘಾತ ಎಸಗಿದರೂ ಲಾರಿ ನಿಲ್ಲಿಸದೇ ಪರಾರಿಯಾಗಲು ಅಜೀಂ ಯತ್ನಿಸಿದ್ದು, ಈ ವೇಳೆ ಅಟ್ಟಿಸಿಕೊಂಡು ಹೋದ ಪರಸಪ್ಪ ಮತ್ತು ಹಣಮಂತ ಕಟಬಾಳಿ ಗ್ರಾಮದ ಬಳಿ ಲಾರಿಗೆ ಕಲ್ಲೆಸೆದು ತಡೆದಿದ್ದಾರೆ. ಈ ವೇಳೆ ಪರಸಪ್ಪ ತನ್ನ ಐವರು ಸ್ನೇಹಿತರ ಜೊತೆಗೂಡಿ ಅಜೀಂ ಜೊತೆಗೆ ವಾಗ್ವಾದ ನಡೆಸಿದ್ದಾನೆ. ಇದು ವಿಕೋಪಕ್ಕೆ ತಿರುಗಿ ಅಜೀಂ ಮರ್ಮಾಂಗಕ್ಕೆ ಒದ್ದು, ಹಲ್ಲೆಗೊಳಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಅಜೀಂನನ್ನು ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಲಾರಿ ಚಾಲಕ ಅಜೀಂ ಇಪ್ಪೇರಿ ಮೃತಪಟ್ಟಿದ್ದಾನೆ. ಯಮಕನಮರಡಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಾಳದ ಪರಸಪ್ಪ, ಹಣಮಂತ, ಹಾಳಪ್ಪ ಹಳ್ಯಾಗೋಳ, ಈರಪ್ಪ ನಾಯಿಕ್, ಅಮಿತ್ ಶಿಂಧೆಯನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.