ಹಾವೇರಿ:- ಇತ್ತೀಚೆಗೆ ಕರ್ನಾಟಕದ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಿತು. ಶಿಗ್ಗಾವಿ, ಚನ್ನಪಟ್ಟಣ, ಸಂಡೂರಿನಲ್ಲಿ ಚುನಾವಣೆ ನಡೆದಿದ್ದು, ಮೂರು ಕ್ಷೇತ್ರಗಳು ಬಹಳ ಜಿದ್ದಾಜಿದ್ದಿನಿಂದ ಕೂಡಿದ್ದವು.
ನಿಖಿಲ್ ಕುಮಾರಸ್ವಾಮಿಗೆ ರಾಜಯೋಗ: ಡಾ ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ ಸ್ಪೋಟಕ ಭವಿಷ್ಯ!
ಇದೇ ವೇಳೆ ಶಿಗ್ಗಾಂವಿಯಲ್ಲಿ ಅನುಮಾನಾಸ್ಪದ ಬ್ಯಾಲೆಟ್ ಬಾಕ್ಸ್ ಪತ್ತೆ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿದ್ದಾರ
ಬಂಧಿತರನ್ನು ಸಂತೋಷ ಮಾಳಗಿ, ಗಣೇಶ ಹರಿಜನ, ಮುತ್ತಪ್ಪ ದೇವಿಹೊಸೂರು, ಕೃಷ್ಣ ಹರಿಜನ ಮತ್ತು ಮಹ್ಮದ್ ಜಾವಿದ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 27 ಬ್ಯಾಲೆಟ್ ಬಾಕ್ಸ್, ಕೃತ್ಯಕ್ಕೆ ಬಳಿಸಿದ 1 ಆಟೋ ಜಪ್ತಿ ಮಾಡಲಾಗಿದೆ.
ಯತ್ತಿನಹಳ್ಳಿ ಗ್ರಾಮದ ಬಳಿಯ ಕಾಲುವೆಯಲ್ಲಿ ಹಳೆಯ ಬ್ಯಾಲೆಟ್ ಬಾಕ್ಸ್ ಸಿಕ್ಕಿದ್ದರಿಂದ ಗ್ರಾಮಸ್ಥರಿಗೆ ಆತಂಕ ಮತ್ತು ಅನುಮಾನ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ನಾಲ್ಕು ದಿನಗಳ ಹಿಂದಷ್ಟೆ ಶಿಗ್ಗಾಂವಿ ಉಪಚುನಾವಣೆಯ ಮತದಾನ ಮುಕ್ತಾಯ ಆಗಿತ್ತು. ಬ್ಯಾಲೆಟ್ ಬಾಕ್ಸ್ ಕಳ್ಳತನವಾಗಿದ್ದು ಜಿಲ್ಲೆಯಲ್ಲಿ ಬಹಳಷ್ಟು ಚರ್ಚೆಗೆ ಕಾರಣವಾಗಿತ್ತು.
ಆರೋಪಿಗಳು ಎಪಿಎಂಸಿ ಗೋಡೌನ್ನ ಬೀಗ ಮುರಿದು ಕಳ್ಳತನ ಮಾಡಿದ್ದರು. ಇದೀಗ ಐವರು ಜನ ಕಳ್ಳರನ್ನ ಪತ್ತೆ ಮಾಡಿದ್ದು, ಪೊಲೀಸ್ ಇಲಾಖೆಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.