ಬೆಳಗಾವಿ:- ತಹಶೀಲ್ದಾರ್ ಕಚೇರಿಯಲ್ಲಿ ರುದ್ರೇಶ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆಯಲ್ಲ ಕೊಲೆ ಎಂದು ಬಂತು ಅನಾಮಧೇಯ ಪತ್ರ ಬಂದಿದೆ.
ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಕೊಲೆ’ ಎಂಬ ಒಕ್ಕಣೆಯುಳ್ಳ ಅನಾಮಧೇಯ ಪತ್ರವೊಂದು ರಾಜ್ಯಪಾಲರು, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ನಗರ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿ, ಪ್ರಕರಣದ ತನಿಖಾಧಿಕಾರಿ ಸೇರಿ ಹಲವರಿಗೆ ಬಂದಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಪ್ರಕರಣದ ಎ1 ತಹಶಿಲ್ದಾರ ಬಸವರಾಜ ನಾಗರಾಳ, ಎ2 ಅಶೋಕ ಕಬ್ಬಲಿಗೇರ್, ಎ3 ಹೆಬ್ಬಾಳ್ಕರ್ ಪಿಎ ಸೋಮುಗೆ ಜಾಮೀನು ಸಿಕ್ಕ ಕೆಲವೇ ದಿನಗಳಲ್ಲಿ ಈ ಪತ್ರ ಬಂದಿರುವುದು ಗೊತ್ತಾಗಿದೆ. ಅಂಚೆ ಮೂಲಕ ಅನಾಮಧೇಯ ವ್ಯಕ್ತಿಯ ಪತ್ರ ಬಂದಿದೆ.
ಅನಾಮಧೇಯ ಪತ್ರದಲ್ಲಿ, ‘ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಕೊಲೆ. ತಹಶಿಲ್ದಾರ್ ಆಪ್ತ ಡ್ರೈವರ್ ಯಲ್ಲಪ್ಪ ಬಡಸದ ಕೊಲೆಗೆ ಸೂತ್ರದಾರ. ತಹಶಿಲ್ದಾರರ ಜೀಪ್ ಚೆಕ್ ಮಾಡಿದರೆ ಎಲ್ಲಾ ಸಿಗುತ್ತವೆ. ಅದು ಸೂಸೈಡ್ ಅಂತಿದ್ದಾರೆ. ಆದರೆ, ಆದ್ರೇ ಆತ್ಮಹತ್ಯೆ ಅಲ್ಲ. ಡ್ರೈವರ್ ಯಲ್ಲಪ್ಪನ ವಿಚಾರಣೆ ಮಾಡಿದರೆ ಕೊಲೆ ರಹಸ್ಯ ಹೊರಗೆ ಬರುತ್ತದೆ. ಯಲ್ಲಪ್ಪನ ಹೆಂಡತಿ ಅನೈತಿಕ ಸಂಬಂಧ ಇಟ್ಟುಕೊಂಡು ಅವನ ಎಲ್ಲ ದುಡ್ಡು ಹೊಡೆದಿರುತ್ತಾಳೆ. ಸತ್ತವನಿಗೆ ನ್ಯಾಯ ಸಿಗಬೇಕು ಕೇಸ್ ಮುಚ್ಚಿ ಹಾಕಬಾರದು’ ಎಂದು ಉಲ್ಲೇಖಿಸಲಾಗಿದೆ