ಬೆಂಗಳೂರು: ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಶೀಘ್ರದಲ್ಲೇ 9 ಸಾವಿರ ಹುದ್ದೆಗಳ ಜತೆಗೆ 1 ಸಾವಿರ ಹುದ್ದೆಗಳನ್ನು ಅನುಕಂಪ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ಇತ್ತೀಚೆಗೆ ಸಿಎಂ ಕೂಡ 500 ಕೋಟಿ ಅನುದಾನ ನೀಡಿದ್ದರು. ಏಳು ವರ್ಷದಿಂದ ನೇಮಕಾತಿ ಆಗಿರಲಿಲ್ಲ. ಡ್ರೈವರ್, ಕಂಡಕ್ಟರ್ ಇಲ್ಲ ಅಂದ್ರೆ ಹೇಗೆ ಬಸ್ ಓಡಿಸುವುದು. ಹೀಗಾಗಿ ಶೀಘ್ರದಲ್ಲೇ ನೇಮಕಾತಿ ಮಾಡುತ್ತೇವೆ ಎಂದು ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.
ಸಾರಿಗೆ ಇಲಾಖೆಯಲ್ಲಿ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. 2 ಸಾವಿರ ಹುದ್ದೆಗಳಿಗೆ ಈಗಾಗಲೇ ನೇಮಕಾತಿಯನ್ನು ಮಾಡಿಕೊಳ್ಳಲಾಗಿದೆ. ಉಳಿದ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿವೆ. 5800 ಹೊಸ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈಗಾಗಲೇ 2400 ಬಸ್ ಗಳ ಖರೀದಿ ಪ್ರಕ್ರಿಯೆ ಪೂರ್ಣ ಆಗಿದೆ ಎಂದು ತಿಳಿಸಿದ್ದಾರೆ.
Health Tips: ನಿಮಗೆ ಗೊತ್ತೆ.? “ದೊಡ್ಡಪತ್ರೆ”ಯಲ್ಲಿದೆ ದೊಡ್ಡ ದೊಡ್ಡ ಆರೋಗ್ಯ ಸಮಸ್ಯೆಯ ನಿವಾರಣೆಯ ಗುಣ!
ಇನ್ಮುಂದೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವರು, ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ನಾಲ್ಕು ನಿಗಮಗಳಿಂದ ಪ್ರಸ್ತಾಪ ಬಂದ ನಂತರದಲ್ಲಿ ಟಿಕೆಟ್ ದರ ಹೆಚ್ಚಳದ ಬಗ್ಗೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇನ್ನೂ ಅಪಘಾತ ಹಾಗೂ ಅಪರಾಧ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ವಿತರಿಸಲಾಗುತ್ತಿದೆ. ಅಪಘಾತ ವಿಮಾ ಯೋಜನೆಯಡಿ ಮೃತಪಟ್ಟ ನೌಕರರ ಕುಟುಂಬಸ್ಥರಿಗೆ 1 ಕೋಟಿ ವಿಮೆ ವಿತರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಯುಪಿಐ ಮೂಲಕ ಪ್ರಯಾಣಿಕರು ಟಿಕೆಟ್ ಪಡೆಯಬಹುದಾಗಿದೆ. ಸಾರಿಗೆ ಸಂಜೀವಿನಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯಡಿ ನೌಕರರು ಹಾಗೂ ಅವರ ಕುಟುಂಬಸ್ಥರು ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎಂದು ಹೇಳಿದರು.