ಬೆಂಗಳೂರು: ಕರ್ನಾಟಕದಲ್ಲಿ ಅನರ್ಹ ರೇಷನ್ ಕಾರ್ಡ್ಗಳ ರದ್ದತಿ ವಿಚಾರವಾಗಿ ಹೆಚ್ಡಿಕುಮಾರಸ್ವಾಮಿ ಮತ್ತು ಬಿಜೆಪಿಗರ ಆರೋಪಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಬಿಜೆಪಿಗೆ, ಕುಮಾರಸ್ವಾಮಿಗೆ ನಮ್ಮ ಸರ್ಕಾರದ ಬಗ್ಗೆ ಹೇಳೋದಕ್ಕೆ ಏನು ಇಲ್ಲ. ಅವರ ಕಾಲದಲ್ಲಿ ಏನೇನು ಅನ್ಯಾಯ ಮಾಡಬೇಕೋ ಮಾಡಿ ಆಗಿದೆ. ಯಾವ ಬಡವರಿಗೂ ಅವರು ಸಹಾಯ ಮಾಡಿಲಿಲ್ಲ, ಒಂದು ಉತ್ತಮ ಯೋಜನೆ ಕೋಡೋದಕ್ಕೂ ಆಗಲಿಲ್ಲ. ಅನ್ನಭಾಗ್ಯ ಯೋಜನೆ ಅವರು ಮಾಡಿದ್ರಾ..?. ಪೆನ್ಷನ್ ಕೊಡುವ ಕಾರ್ಯಕ್ರಮ ಅವರು ಮಾಡಿದ್ರಾ?. ಸೈಟ್ ಕೋಡೊ ಕಾರ್ಯಕ್ರಮ ಅವರು ಮಾಡಿದ್ರಾ? ಜಮೀನು ಕೊಟ್ಟವರು ಅವರಾ ಎಂದು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದರು.
ಈಗ ಕೆಲವರು ಸರ್ಕಾರಿ ನೌಕರರಿದ್ದಾರೆ, ಅನುಕೂಲಸ್ಥರಿದ್ದಾರೆ ಅವರಿಗೆಲ್ಲಾ ಬಿಪಿಎಲ್ ಕಾರ್ಡ್ ಸೌಲಭ್ಯ ಸಿಗುತ್ತಿದೆ. ಅವುಗಳನ್ನು ಸರ್ವೇ ಮಾಡುತ್ತಿದ್ದೇವೆ, ನಮ್ಮ ರಾಜ್ಯದಲ್ಲಿ ಅನುಕೂಲ ಇದೆ. ಬಡವರು ಯಾರು ಅನ್ನೋದರ ಲಿಮಿಟೇಷನ್ ರಾಜ್ಯ ಸರ್ಕಾರವೇ ಮಾಡಿದೆ. ಕೆಲವರು ಜಿಎಸ್ಟಿ ಟ್ಯಾಕ್ಸ್ ಕಟ್ಟುತ್ತಿದ್ದಾರೆ. ಅದರಲ್ಲಿ ಬಡವರು ಇದ್ದಾರೆ ಅಂದ್ರೆ ಮತ್ತೆ ಕೊಡಬೇಕು ಎಂದು ನಿರ್ಧರಿಸಿದ್ದೇವೆ. ಈ ಬಗ್ಗೆ ನಿನ್ನೆಯೇ ಸಿಎಂ ಅವರು ಸೂಚನೆ ಕೊಟ್ಟಿದ್ದಾರೆ. ಯಾವ ಬಡವರಿಗೂ ತೊಂದ್ರೆ ಆಗಲ್ಲ, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬಿಜೆಪಿ ಹಾಗೂ ಜೆಡಿಎಸ್ನವರು ಮಾಡ್ತಾ ಇದ್ದಾರೆ ಎಂದು ಕಿಡಿ ಕಾರಿದರು.