ಬೆಂಗಳೂರು:- ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿ ಚಳಿ ಆರಂಭವಾಗಿದೆ. ಈಗಾಗಲೇ ಉತ್ತರ ಕರ್ನಾಟಕ ಸೇರಿದಂತೆ ಬೆಂಗಳೂರಿನಲ್ಲಿ ಚಳಿ ಆರಂಭವಾಗಿದೆ.
ಸುಳ್ಳು ಸುದ್ದಿ ನಂಬಬೇಡಿ, ಬಿಪಿಎಲ್- ಎಪಿಎಲ್ ಯಾವ ಕಾರ್ಡ್ ರದ್ದಾಗಲ್ಲ: ಕೆ.ಹೆಚ್.ಮುನಿಯಪ್ಪ!
ಈ ಬಾರಿ ಸತತವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ಹವಾಮಾನ ಪರಿಸ್ಥಿತಿ ಬದಲಾಗಿದ್ದು, ಈ ಬಾರಿ ಅಧಿಕ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಚಳಿಗಾಲ ಆರಂಭಕ್ಕೂ ಮುನ್ನವೇ ಚಳಿ ಹೆಚ್ಚಾಗಿದ್ದು, ವಾತಾವರಣ ಬದಲಾವಣೆಯಿಂದ ನಮ್ ಬೆಂಗಳೂರು ಮಂದಿ ಈಗಾಗಲೇ ಸ್ವೆಟರ್, ಸ್ಕಾರ್ಫ್, ಮಪ್ಲರ್, ಜರ್ಕಿನ್ ಹಾಗೂ ದೊಡ್ಡ ದೊಡ್ಡ ಕಂಬಳಿಯ ಮೊರೆ ಹೋಗಿದ್ದಾರೆ. ಅಷ್ಟೇ ಅಲ್ಲದೇ ಮಾರ್ಕೆಟ್ಗೆ ಸ್ವೇಟರ್ ಗಳು ಲಗ್ಗೆ ಇಟ್ಟಿವೆ.
ಈ ಬಾರಿ ಚಳಿಗಾಲದಲ್ಲಿ ನಸುಕಿನ ಜಾವ 4 ಗಂಟೆಯಿಂದ ಬೆಳಗ್ಗೆ 8ಗಂಟೆಯವರೆಗೂ ಶೀತದ ವಾತವರಣ ಇರುತ್ತಿರುವುದಿರಿಂದ ಶೀತ -ಜ್ವರ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಉಸಿರಾಟ, ಎಲುಬು ಕೀಲು ನೋವು ಇರುವವರು ಆದಷ್ಟು ಬೆಚ್ಚಗೆ ಇರುವಂತೆ ಮತ್ತು ಚಳಿಗಾಲ ಮುಗಿಯೋ ವರೆಗೆ ಉಗುರು ಬೆಚ್ಚಗಿನ ನೀರು ಬಿಸಿ ಆಹಾರ ಸೇವಿಸುವಂತೆ ಹವಾಮಾನ ಇಲಾಖೆ ತಜ್ಞರು ಸೂಚನೆ ನೀಡಿದ್ದಾರೆ.
ಇನ್ನೂ ಈ ಪರಿಸ್ಥಿತಿಗೆ ಮುಖ್ಯ ಕಾರಣ ಫೆಸಿಫಿಕ್ ಮಹಾಸಾಗರದಲ್ಲಿ ಮೇಲ್ಮೈ ಉಷ್ಣಾಂಶವು ಕಡಿಮೆ ಇರಲಿದ್ದು, ಇದಕ್ಕೆ ಲಾ-ನಿನ್ ಪರಿಸ್ಥಿತಿ ಎಂದು ಕರೆಯುತ್ತಾರೆ. ಈ ಲಾ-ನಿನ್ ಪರಿಸ್ಥಿತಿಯಿಂದ ಚಳಿಗಾಲವು ಮಾರ್ಚ್ ವರೆಗೂ ಮುಂದುವರೆಯುತ್ತದೆ.
ಜೊತೆಗೆ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ 8ರಿಂದ 10ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ಹಾಗೂ ಬೆಂಗಳೂರಲ್ಲಿ 12ರಿಂದ 14ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ಇರಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.