ಬೆಂಗಳೂರು: ರಾಜ್ ಕುಮಾರ್ ರಸ್ತೆಯಲ್ಲಿ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ ಪ್ರಕರಣ ಸಂಬಂಧ ಇದೀಗ ಬೈಕ್ ಶೋರೂಂ ಮಾಲೀಕ ಪುನೀತ್ ನನ್ನು ಬಂಧಿಸಲಾಗಿದೆ. ನಿರ್ಲಕ್ಷ್ಯ ಆರೋಪದಡಿಯಲ್ಲಿ ಪುನೀತ್ ಬಂಧಿಸಲಾಗಿದ್ದು, ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.
ರಾಜ್ ಕುಮಾರ್ ರಸ್ತೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಶಾರ್ಟ್ ಸರ್ಕ್ಯೂಟ್ನಿಂದ ಸಂಪೂರ್ಣ ಭಸ್ಮವಾಗಿತ್ತು. ಘಟನೆಯಲ್ಲಿ ಶೋರೂಮ್ನಲ್ಲಿ ಸೇಲ್ಸ್ ಗರ್ಲ್ ಆಗಿದ್ದ ಪ್ರಿಯಾ ಎಂಬ ಯುವತಿ ಸಾವಿಗೀಡಾಗಿದ್ದಾಳೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಮೃತ ಯುವತಿಯ ಪೋಷಕರು ಶೋರೂಂ ಮಾಲೀಕನ ವಿರುದ್ಧ ದೂರು ನೀಡಿದ್ದು, ಸದ್ಯ ಶೋರೂಂ ಮಾಲೀಕ ಪುನೀತ್ ನನ್ನು ಬಂಧಿಸಿರುವ ರಾಜಾಜಿನಗರ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.