ಬೆಂಗಳೂರು: ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸುವ ವಿಷಯ ಕರ್ನಾಟಕದಲ್ಲಿ ಭಾರೀ ಗದ್ದಲ ಸೃಷ್ಟಿಸಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಜನರಿಗೆ ಅಭಯದ ಹಸ್ತ ಚಾಚಿದ್ದಾರೆ. ಬಡವರಿಗೆ ಅನ್ಯಾಯ ಆಗದಂತೆ ಖಡಕ್ ಸೂಚನೆಯೊಂದನ್ನ ರವಾನಿಸಿದ್ದಾರೆ. ಇದರ ಬೆನ್ನಲ್ಲೇ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರ ಪೈಕಿ ಯಾರು ತೆರಿಗೆ ಕಟ್ಟುವುದಿಲ್ಲವೋ ಅಂತವರಿಗೆ ಗೃಹಲಕ್ಷ್ಮಿ ಹಣ ಬರುತ್ತೆ. 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನ ರದ್ದತಿ ಮಾಡೋ ಬದಲು ಎಪಿಎಲ್ಗೆ ವರ್ಗವಾಣೆ ಮಾಡಿದ್ದಾರೆ.
ವರ್ಗವಣೆ ಮಾಡಿರೋದರಿಂದ ಯಾವುದೇ ಗೊಂದಲ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ರಾಜ್ಯದಲ್ಲಿ ಬಿಪಿಎಲ್’ಗೆ ಅರ್ಹವಲ್ಲದ ಸುಮಾರು 80,000 ಕಾರ್ಡ್ಗಳನ್ನು ರದ್ದು ಮಾಡುವ ಬದಲು ಎಪಿಎಲ್ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಯಾವುದೇ ಗೊಂದಲ ಇಲ್ಲ. ಎಪಿಎಲ್, ಬಿಪಿಎಲ್ ಕಾರ್ಡ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ.
ಈ ಬಗ್ಗೆ ಗೊಂದಲ ಬೇಡ. ಆದರೆ, ಸರ್ಕಾರಿ ನೌಕರರು, ತೆರಿಗೆ ಪಾವತಿದಾರರಿಗೆ ಎಪಿಎಲ್ ಇರಲಿ, ಬಿಪಿಎಲ್ ಇರಲಿ ಗೃಹಲಕ್ಷ್ಮೀ ಹಣ ಸಂದಾಯ ಆಗುವುದಿಲ್ಲ, ಇದರಿಂದ ಬಿಪಿಎಲ್ ರೇಷನ್ ಕಾರ್ಡ್ ರದ್ದಾದರೆ ಗೃಹಲಕ್ಷ್ಮಿ ಯೋಜನೆ ಹಣವು ಬಂದ್ ಆಗುತ್ತಾ ಎಂಬ ಆತಂಕದಲ್ಲಿರುವ ಮಹಿಳೆಯರಿಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿ ವಿಚಾರಕ್ಕೆ ಮಾತನಾಡಿ, ಇಡೀ ದೇಶದಲ್ಲಿ ಈ ರೀತಿಯ ವ್ಯವಹಾರ ನಡೆಯುತ್ತಿದೆ, ಬಿಜೆಪಿಯವರು ನಿರಂತರವಾಗಿ ಇಂತಹ ಪ್ರಯತ್ನ ಮಾಡ್ತಿದ್ದಾರೆ, ನಾವು ಗಟ್ಟಿಯಾಗಿದ್ದೇವೆ, ಸುಭದ್ರವಾಗಿರೋ ಸರ್ಕಾರವನ್ನ ಏನು ಮಾಡಲಿಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.