ತಮಿಳುನಾಡು: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ತರಗತಿಗೆ ನುಗ್ಗಿ ಮಕ್ಕಳ ಎದುರೇ ಶಿಕ್ಷಕಿಯ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ರಮಣಿ (26) ಕೊಲೆಯಾದ ಶಿಕ್ಷಕಿಯಾಗಿದ್ದು, ಹತ್ಯೆಗೈದ ಆರೋಪಿಯನ್ನು ಮದನ್ (30) ಎಂದು ಗುರುತಿಸಲಾಗಿದೆ.
ಆತ ರಮಣಿಯವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಅವರ ಕುತ್ತಿಗೆಗೆ ಆಳವಾದ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಸಾರ್ವಜನಿಕರೇ ಗಮನಿಸಿ.. ನಿಮ್ಮ ಬಳಿ 500 ರೂಪಾಯಿ ನೋಟು ಇದ್ಯಾ..? ಕ್ಷಣಮಾತ್ರದಲ್ಲಿ ನೀವು ಆಗ್ಬೋದು ಮಿಲಿಯನೇರ್!
ರಮಣಿಯವರು ತಂಜಾವೂರು ಜಿಲ್ಲೆಯ ಮಲ್ಲಿಪಟ್ಟಣಂ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ರಮಣಿ ಹಾಗೂ ಮದನ್ ಕುಟುಂಬ ಭೇಟಿಯಾಗಿ ಮದುವೆಯ ವಿಚಾರ ಚರ್ಚಿಸಿದ್ದರು. ಈ ವೇಳೆ ಮದುವೆ ಪ್ರಸ್ತಾಪವನ್ನು ರಮಣಿಯವರು ತಿರಸ್ಕರಿಸಿದ್ದರು ಎಂದು ವಿಚಾರಣೆಯಿಂದ ತಿಳಿದುಬಂದಿದೆ.
ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮಿಳಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ತಕ್ಷಣವೇ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ನಡೆಸುವಂತೆ ಆದೇಶಿಸಿದ್ದಾರೆ. ಅಲ್ಲದೇ ಶಾಲೆಯ ಭೇಟಿಗೆ ತೆರಳಿದ್ದಾರೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.