ಮಂಗಳೂರು: ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. 15% ರಿಂದ 20% ರಷ್ಟು ಶುಲ್ಕ ಹೆಚ್ಚಳದ ಬಗ್ಗೆ ಚರ್ಚೆಗಳಿವೆ.
ಈ ಹಿಂದೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮಾತ್ರ ಆರೋಗ್ಯ ಇಲಾಖೆಯ ಆಯುಕ್ತರ ಅನುಮತಿ ಪಡೆದು ಶುಲ್ಕ ಪರಿಷ್ಕರಣೆ ಮಾಡಲಾಗಿದೆ. ಉಳಿದ ಯಾವುದೇ ಆಸ್ಪತ್ರೆಗಳಲ್ಲಾಗಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಾಗಲಿ ಇಲ್ಲಿಯವರೆಗೂ ಸೇವಾ ಶುಲ್ಕದಲ್ಲಿ ಹೆಚ್ಚಳವಾಗಿಲ್ಲ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಗೆ ಹೊರೆಯಾಗದಂತೆ ಸೂಕ್ತ ರೀತಿಯಲ್ಲಿ ಶುಲ್ಕ ಪರಿಷ್ಕರಣೆ ಮಾಡುವುದಾಗಿ ಹೇಳಿದರು.
ಅಬ್ಬಾಬ್ಬ.. ನೀಲಗಿರಿ ಎಲೆಗಳಿಂದ ಆರೋಗ್ಯಕ್ಕೆ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ?
ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಇಲ್ಲಿಯವರೆಗೂ ಸಾಮೂಹಿಕವಾಗಿ ಯಾವುದೇ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.