ತುಮಕೂರು:-ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಕೋರ್ಟ್ ಆದೇಶ ಹೊರಡಿಸಿದೆ.
ಬಡವರ BPL ಕಾರ್ಡ್ ರದ್ದಾಗಲು ಕಾರಣ ಏನು!? ಇದು ನೀವು ಓದಲೇಬೇಕಾದ ಸುದ್ದಿ!
ಇತ್ತೀಚೆಗೆ ಇಡೀ ದೇಶದ ಗಮನ ಸೆಳೆದಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದಲ್ಲಿ ದಲಿತರ ಗುಡಿಸಲುಗಳಿಗೆ ಅನ್ಯ ಸಮುದಾಯದವರು ಬೆಂಕಿ ಹಚ್ಚಿದ ಘಟನೆಯಲ್ಲಿ ಆರೋಪಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಅದರ ಬೆನ್ನಲ್ಲೇ ಈ ತೀರ್ಪು ಇದೀಗ ಗಮನ ಸೆಳೆದಿದೆ.
2010ರ ಜೂನ್ 28ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಡಾಬಾ ಹೊನ್ನಮ್ಮ ಎಂಬ ದಲಿತ ಮಹಿಳೆ ಕೊಲೆಯಾಗಿದ್ದು, ಇದೀಗ 14 ವರ್ಷಗಳ ಬಳಿಕ ಒಂದೇ ಗ್ರಾಮದ ಬರೋಬ್ಬರಿ 21 ಆರೋಪಿಗಳಿಗೆ ತುಮಕೂರು 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.