ರಾಯಚೂರು:- ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿ ಆದಮೇಲೆ ಎಲ್ಲರಿಗೂ ಬಸ್ ಕೊರತೆ ಎದುರಾಗಿದೆ. ಒಂದು ಸರಿಯಾದ ಸಮಯಕ್ಕೆ ಬಸ್ ಇಲ್ಲ, ಇನ್ನೊಂದು ಬರುವ ಬಸ್ ಗಳೆಲ್ಲಾ ರಷ್ ಆಗಿ ಬಂದು ಬಸ್ ಒಳಗಡೆ ಕಾಲಿಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಪ್ರಯಾಣಿಕರು ಸಹಜವಾಗಿಯೇ ಸಿಟ್ಟಾಗುತ್ತಾರೆ.
ರಾಜಕೀಯ ಪುಡಾರಿಗಳ ಪುಂಡಾಟ: ಟೋಲ್ ಕಟ್ಟದೇ “ಕೈ ಮುಖಂಡನ ದರ್ಪ, ಮಹಿಳಾ ಸಿಬ್ಬಂದಿಗೆ ಹಲ್ಲೆ!
ಅದರಂತೆ ಇಲ್ಲೋರ್ವ, ಊರಿಗೆ ಹೋಗಲು ಬಸ್ ಸಿಗಲಿಲ್ಲ ಎಂದು ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಘಟನೆ ಸಂಬಂಧ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತ ಆರೋಪಿಯನ್ನು ಲಿಂಗಸುಗೂರಿನ ಗೋಲಪಲ್ಲಿಯ ತಿಮ್ಮಣ್ಣ ಎಂದು ಗುರುತಿಸಲಾಗಿದೆ. ಗ್ರಾಮದ ಬಳಿ ನ.19ರ ಬೆಳಗಿನ ಜಾವ 2ರ ವೇಳೆ ಆರೋಪಿ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದ. ಕಲ್ಲು ತೂರಾಟದಲ್ಲಿ ಮೂರು ಸಾರಿಗೆ ಬಸ್, ಕಾರು ಹಾಗೂ ಲಾರಿಗಳ ಗಾಜುಗಳು ಒಡೆದು ಹೋಗಿದ್ದವು. ಅಲ್ಲದೇ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು.
ಈ ಘಟನೆ ಪೊಲೀಸರಿಗೆ ತಲೆನೋವಾಗಿತ್ತು. ಕಳ್ಳತನ ಮಾಡಲು ವಾಹನಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ ಎಂದು ಶಂಕಿಸಲಾಗಿತ್ತು. ಆರೋಪಿಗಳು ಕುಡಿದ ಮತ್ತಿನಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.