ಮಂಡ್ಯ: ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ತಯಾರಿ ಬಿರುಸಿನಿಂದ ಸಾಗುತ್ತಿದೆ. ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಲಾಯಿತು. ಮಂಡ್ಯ ಹೊರವಲಯದ ಶ್ರೀನಿವಾಸಪುರ ಗ್ರಾಮದ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿಯವರು ಭೂಮಿ ಪೂಜೆ ನಡೆಸಿದರು.
ರೈತರ ಪರ ಎಂಬ ದೇವೇಗೌಡ್ರು ನಬಾರ್ಡ್ ಬಗ್ಗೆ ಮಾತಾಡುತ್ತಿಲ್ಲ – ಸಚಿವ ಚಲುವರಾಯ ಸ್ವಾಮಿ ಕಿಡಿ
ಸುಮಾರು 60 ಎಕರೆ ಪ್ರದೇಶದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಪ್ರಧಾನ ವೇದಿಕೆ, ಸಮನಾಂತರ ವೇದಿಕೆಗಳಿಗೆ ಭೂಮಿ ಪೂಜೆ, ಹವನ ಕಾರ್ಯಕ್ರಮ ನಡೆಯಿತು. ಈ ವೇಳೆ ಶಾಸಕರಾದ ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ, ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ ಮಾದೇಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಡಿಸಿ ಕುಮಾರ್, ಎಸ್ ಪಿ, ಮಲ್ಲಿಕಾರ್ಜುನ ಬಾಲದಂಡಿ ಉಪಸ್ಥಿತರಿದ್ದರು.