ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವೂ ಪರ್ತ್ನಲ್ಲಿ ನಡೆಯುತ್ತಿದೆ. ಭರ್ಜರಿ ಓಪನಿಂಗ್ ತೆಗೆದುಕೊಂಡಿದ್ದ ಕನ್ನಡಿಗ ಕೆ.ಎಲ್ ಅವರು ವಿವಾದಾತ್ಮಕ ತೀರ್ಪಿಗೆ ಔಟ್ ಆಗಿದ್ದು ಅಭಿಮಾನಿಗಳಿಗೆ ನಿರಾಸೆಯಾಗಿದೆ.
ಹೌದು ಟಾಸ್ ಗೆದ್ದು ಮೊದಲ ಬ್ಯಾಟ್ ಮಾಡಿದ ಭಾರತ 32 ರನ್ಗಳಿಗೆ 3 ವಿಕೆಟ್ ಕಳೆದುಕೊಂಡಿತ್ತು. ಪರಿಸ್ಥಿತಿ ಹೀಗಿದ್ದರೂ ಆರಂಭಿಕರಾಗಿ ಕಣಕ್ಕೆ ಇಳಿದಿದ್ದ ರಾಹುಲ್ ನಿಧಾನವಾಗಿ ಬ್ಯಾಟ್ ಬೀಸಿ ಇನ್ನಿಂಗ್ಸ್ ಕಟ್ಟುತ್ತಿದ್ದರು. ಭಾರತ ಇನ್ನಿಂಗ್ಸ್ನ 23 ಓವರ್ ಅನ್ನು ಸ್ಟ್ರಾಕ್ ಎಸೆಯುತ್ತಿದ್ದರು. ಎರಡನೇ ಎಸೆತದ ವೇಳೆ ಸ್ಟೈಕ್ನಲ್ಲಿ ರಾಹುಲ್ ಬಾಲನ್ನು ತಡೆಯಲು ಯತ್ನಿಸಿದರು. ಆದರೆ ಬಾಲ್ ಬ್ಯಾಟ್ನ ಎಡ್ಜ್ ಬಳಿ ಸಾಗಿ ವಿಕೆಟ್ ಕೀಪರ್ ಕೈ ಸೇರಿತು.
ಯಾವದೇ ಕಾರಣಕ್ಕೂ ಈ ದಿನ ಉಗುರುಗಳನ್ನು ಕತ್ತರಿಸಲೇಬೇಡಿ! ಕಷ್ಟ. ಬಡತನ ಬೆಂಬಿಡದೆ ಕಾಡುತ್ತೆ
ಆಸ್ಟ್ರೇಲಿಯಾದ ಆಟಗಾರರು ಔಟ್ ಮನವಿ ಸಲ್ಲಿಸಿದರೂ ಫೀಲ್ಡ್ ಅಂಪೈರ್ ಔಟ್ ನೀಡಿರಲಿಲ್ಲ. ಹೀಗಾಗಿ ಆಸೀಸ್ ಆಟಗಾರರು ಡಿಆರ್ಎಸ್ (DRS) ಮನವಿ ಮಾಡಿದರು.
ರಿಪ್ಲೈ ವೇಳೆ ಚೆಂಡು ಬ್ಯಾಟ್ಗೆ ತಾಗಿದೆಯೇ ಅಥವಾ ಪ್ಯಾಡ್ಗೆ ತಾಗಿದೆಯೇ ಎಂಬುದು ಸ್ಪಷ್ಟವಾಗಿರಲಿಲ್ಲವಾದರೂ, ಸ್ನಿಕ್ಕೋಮೀಟರ್ ಏರಿಳಿತವನ್ನು ಆಧರಿಸಿ ರಾಹುಲ್ ಔಟ್ ಎಂದು ತೀರ್ಪು ಪ್ರಕಟಿಸಲಾಯಿತು. ಹೀಗಾಗಿ ಫೀಲ್ಡ್ ಅಂಪೈರ್ ಕೂಡ ತಮ್ಮ ನಿರ್ಧಾರ ಬದಲಿಸಿ ಔಟ್ ತೀರ್ಪು ನೀಡಿದರು. 26 ರನ್ ಗಳಿಸಿದ ಕೆಎಲ್ ರಾಹುಲ್ ಅಸಮಾಧಾನದಿಂದಲೇ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕಿದರು.
ನಂತರ ರಿಪ್ಲೈ ನೋಡಿದಾಗ ಪ್ಯಾಡಿಗೆ ಬ್ಯಾಟ್ ಬಡಿದಿರುವುದು ಗೊತ್ತಾಗಿದೆ. ಮೂರನೇ ಅಂಪೈರ್ ಸ್ವಲ್ಪ ಪರಿಶೀಲನೆ ಮಾಡಿ ಇನ್ನೊಂದು ಕೋನದಿಂದ ನೋಡಿದ್ದರೆ ತೀರ್ಪು ಬದಲಾಗುವ ಸಾಧ್ಯತೆ ಇತ್ತು. ಈಗ ಈ ವಿಚಾರವನ್ನು ಅಭಿಮಾನಿಗಳು ಪ್ರಸ್ತಾಪಿಸಿ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತಪಡಿಸುತ್ತಿದ್ದಾರೆ.