ಬೆಂಗಳೂರು: ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್ಡಿ ದೇವೇಗೌಡ, ಹೆಚ್ಡಿ ಕುಮಾರಸ್ವಾಮಿ ಅವರನ್ನು ಬೆಳೆಸಿದ್ದು ರಾಮನಗರ ಜಿಲ್ಲೆಯ ಜನ. ಚುನಾವಣೆ ಸಂದರ್ಭದಲ್ಲಿ ಜನರಿಗೆ ನಾನು ಭರವಸೆ ಕೊಟ್ಟಿದ್ದೆ. ಆ ಭರವಸೆ ಕೇವಲ ಚುನಾವಣೆಗೆ ಸಂಬಂಧಪಟ್ಟಿದ್ದಲ್ಲ. ನಾನು ಕೊಟ್ಟ ಮಾತನ್ನು ಹಿಂಪಡೆಯಲ್ಲ ಎಂದರು.
ನಾನು ರಾಮನಗರದಲ್ಲಿ ಜನಿಸಿಲ್ಲ, ಆದರೆ, ಭಾವನಾತ್ಮಕ ಸಂಬಂಧವಿದೆ. ನಾನು ಹೆಚ್ಡಿ ಕುಮಾರಸ್ವಾಮಿ ಅವರ ಜೊತೆ ಸೇರಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತೇನೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ದುಡಿದಿದ್ದಾರೆ. ಒಂದು ಸಮುದಾಯದ ಮತದಾರರು ಕಾಂಗ್ರೆಸ್ ಪರ ನಿಂತಿದ್ದಾರೆ. ಸೋಲಿನಿಂದ ಎದೆಗುಂದುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.