ಸೌದಿ ಅರೇಬಿಯಾದ ಜೆಡ್ಡಾ ಮತ್ತು ಅಬಾಡಿ ಅಲ್-ಜೋಹರ್ ಅರೆನಾದಲ್ಲಿ ಇಂದು ಮತ್ತು ನಾಳೆ ಐಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದೆ. ಇನ್ನೂ ಇದರ ಭಾಗವಾಗಿ ಟೀಂ ಇಂಡಿಯಾದ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ ಬರೋಬ್ಬರಿ 26.75 ಕೋಟಿ ರೂ.ಗಳಿಗೆ ಪಂಜಾಬ್ ಪಾಲಾದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಮೊದಲ ಭಾರತೀಯ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ತೀವ್ರ ಪೈಪೋಟಿಯಿಂದ ಕೂಡಿದ್ದ ಬಿಡ್ಡಿಂಗ್ನಲ್ಲಿ ಅಯ್ಯರ್ ಅವರನ್ನ ಖರೀದಿಸಲು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಜಿದ್ದಾ ಜಿದ್ದಿ ನಡೆದಿತ್ತು. ಅಲ್ಲದೇ ಪ್ರೇಕ್ಷರಕ ಎದೆ ಬಡಿತವೂ ಹೆಚ್ಚಾಗಿತ್ತು, ಹರಾಜು ನಡೆಸಿಕೊಡುತ್ತಿದ್ದ ಮಹಿಳೆ ಮಲ್ಲಿಕಾ ಸಾಗರ್ ಬಿಡ್ ಕೂಗಿ ಕೂಗಿ ಸುಸ್ತಾಗಿದ್ದರು. ಆದ್ರೆ ಪಟ್ಟು ಬಿಡದ ಪಂಜಾಬ್ 26.75 ಕೋಟಿ ರೂ.ಗೆ ಅಯ್ಯರ್ ಅವರನ್ನ ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಯಿತು.
ರೈತರೇ ಗಮನಿಸಿ.. “ಗಂಗಾ ಕಲ್ಯಾಣ ಯೋಜನೆ”ಯಡಿ ಉಚಿತ ಬೋರ್ವೆಲ್ ಕೊರೆಸುವಿಕೆಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ಸಹಾಯಧನ!
2024ರ ಐಪಿಎಲ್ಗೆ ನಡೆದ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ಕ್ 24.75 ಕೋಟಿ ರೂ.ಗಳಿಗೆ ಬಿಕರಿಯಾಗಿದ್ದರು. ಇದು ಈವರೆಗಿನ ದಾಖಲೆಯಾಗಿತ್ತು. ಈವರೆಗೆ ಐಪಿಎಲ್ನಲ್ಲಿ 115 ಪಂದ್ಯಗಳನ್ನಾಡಿರುವ ಶ್ರೇಯಸ್ ಅಯ್ಯರ್ 3,127 ರನ್ ಗಳಿಸಿದ್ದಾರೆ. ಇದರಲ್ಲಿ 21 ಅರ್ಧಶತಕಗಳು ಸೇರಿವೆ. 2024ರ ಐಪಿಎಲ್ನಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲೇ ಕೋಲ್ಕತ್ತಾ ನೈಟ್ರೈಡರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.